ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜಿಲ್ಲಾದ್ಯಂತ ಸಂಭ್ರಮದ ಈದ್ ಮಿಲಾದ್ ಆಚರಣೆ

Parashurama
Updated On : 26 Jan 2013, 12:42 pm

ಕೋಲಾರ: ನಗರದಲ್ಲಿ ಈದ್ ಮಿಲಾದ್‌ಅನ್ನು ಮುಸ್ಲಿಮರು ಅದ್ಧೂರಿಯಾಗಿ ಆಚರಿಸಿದರು.
ಶುಕ್ರವಾರ ಸಂಜೆ ನಗರದಲ್ಲಿ ಹಮ್ಮಿಕೊಂಡಿದ್ದ ಮೆರವಣಿಗೆಯಲ್ಲಿ ಸಾವಿರಾರು ಮುಸ್ಲಿಮರು ಭಾಗವಹಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಮೆರವಣಿಗೆಯಿಂದ ನಗರದ ಹಲವು ರಸ್ತೆಗಳಲ್ಲಿ ವಾಹನಗಳ ಸಂಚಾರ ನಿಷೇಧಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿತ್ತು. ಯುವಕರು, ಮಕ್ಕಳು ಮಹಮ್ಮದ್ ಪೈಗಂಬರ್‌ಗೆ ಜಯಕಾರ ಹಾಕಿದರು. ಮೆರವಣಿಗೆ ಶಾಂತಿಯುತವಾಗಿ ನಡೆಯಿತು.
ಅಂಜುಮನ್ ಸಂಸ್ಥೆಯ ಮುಖಂಡರು ಹಾಗೂ ಕಾರ್ಯಕರ್ತರು ಕಾರ್ಯಕ್ರಮ ಶಾಂತಿಯುತವಾಗಿ ನಡೆಯುವುದಕ್ಕೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಿದ್ದರು. ಮೆರವಣಿಗೆ ನಂತರ ನಗರದ ಅಂಜುಮನ್ ಸಂಸ್ಥೆಯ ಮುಂಭಾಗ ಸಾರ್ವಜನಿಕ ಸಮಾರಂಭ ಏರ್ಪಡಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಆರ್. ವರ್ತೂರ್ ಪ್ರಕಾಶ್, ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ನಜೀರ್ ಅಹಮ್ಮದ್, ಮಾಜಿ ಸಚಿವ ನಿಸಾರ್ ಅಹಮ್ಮದ್, ಜೆಡಿಎಸ್ ಮುಖಂಡ ಕೆ. ಶ್ರೀನಿವಾಸಗೌಡ, ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ಅಂಜುಮನ್ ಸಂಸ್ಥೆಯ ಅಧ್ಯಕ್ಷ ಕೆ.ಎಂ. ಜಮೀರ್ ಅಹಮ್ಮದ್, ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಅಕ್ರಂ, ಜಿಲ್ಲಾಧಿಕಾರಿ ಡಾ.ಡಿ.ಎಸ್. ವಿಶ್ವನಾಥ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ನಿವಾಸ್ ಸಪಟ್, ಜಿಪಂ ಸಿಇಒ ಜುಲ್ಫಿಖರ್ ಉಲ್ಲಾ, ಜಿಲ್ಲಾ ವಕ್ಫ್ ಸಮಿತಿ ಅಧ್ಯಕ್ಷ ಬೆಗ್ಲಿ ಸಿರಾಜ್, ಕೂಡಾ ಮಾಜಿ ಅಧ್ಯಕ್ಷ ಅಬ್ದುಲ್ ಖಯ್ಯೂಂ, ಮುಖಂಡರಾದ ಇಮ್ರಾನ್ ಇನ್ನಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments