ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಪೈಗಂಬರ್ ಬಗ್ಗೆ ಪ್ರವಚನ

Parashurama
Updated On : 26 Jan 2013, 12:43 pm

ಚಿಕ್ಕಬಳ್ಳಾಪುರ: ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಹುಟ್ಟುಹಬ್ಬದ ಅಂಗವಾಗಿ ಆಚರಿಸಲಾಗುವ ಈದ್ ಮಿಲಾದ್ ಹಬ್ಬದ ದಿನವಾದ ಶುಕ್ರವಾರದಂದು ಮುಸ್ಲಿಮರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು. ಈ ಮೂಲಕ ಹಬ್ಬವನ್ನು ಸಡಗರದಿಂದ ಆಚರಿಸಿದರು.
ಮಿಲಾದ್ ಕಮಿಟಿಯ ನೇತೃತ್ವದಲ್ಲಿ ಮುಸ್ಲಿಮರು ನಗರದ ನಗರಸಭೆಯ ಸಮೀಪ ಇರುವ ಜಾಮೀಯಾ ಮಸೀದಿಯಿಂದ ಮೆರವಣಿಗೆಯಲ್ಲಿ ತೆರಳಿದರು. ಮಹಮದ್ ಪೈಗಂಬರ್ ಅವರಿಗೆ ಜೈಕಾರ ಕೂಗುತ್ತ ನಗರದ ಬಜಾರ್ ರಸ್ತೆ, ಬಿ.ಬಿ. ರಸ್ತೆ ಹಾಗೂ ಎಂ.ಜಿ. ರಸ್ತೆ ಮೂಲಕ ಸಾಗಿ ಈದ್ಗಾ ಮೈದಾನದಲ್ಲಿ ಜಮಾವಣೆಗೊಂಡು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಈದ್ಗಾ ಮೈದಾನದಲ್ಲಿ ಇಸ್ಲಾಂ ಧರ್ಮಗುರುಗಳು ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಬಗ್ಗೆ ಪ್ರವಚನ ನೀಡಿದರು. ಪ್ರಾರ್ಥನೆಯಲ್ಲಿ ಮಿಲಾದ್ ಕಮಿಟಿಯ ಅಧ್ಯಕ್ಷ ಸಿರಾಜುಲ್ಲಾ ಷರೀಫ್, ಉಪಾಧ್ಯಕ್ಷ ಅಯೂಬ್ ಪಾಷಾ, ಕಾರ್ಯದರ್ಶಿ ಹದೀಂಮುಲ್ಲಾ ಮತ್ತಿತರರು ಭಾಗವಹಿಸಿದ್ದರು. ಮುಸ್ಲಿಮರಿಗೆ ಅನೇಕ ಮುಖಂಡರು, ಗಣ್ಯರು ಶುಭ ಕೋರಿದರು.ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments