ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಪ್ರತಿಭೆ ಹೊರತರಲು ಸ್ಪರ್ಧೆ ಪೂರಕ: ರಘುನಾಥ್‌ರೆಡ್ಡಿ

Parashurama
Updated On : 26 Jan 2013, 12:42 pm

ಶಿಡ್ಲಘಟ್ಟ: ಮಕ್ಕಳಲ್ಲಿ ಅಡಗಿರುವ ಸುಪ್ತ ಜ್ಞಾನವನ್ನು ಬೆಳಕು ಚೆಲ್ಲಲು ಸಾಹಿತ್ಯ ಸ್ಪರ್ಧೆಗಳು ಸ್ಫೂರ್ತಿದಾಯಕವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥ್‌ರೆಡ್ಡಿ ತಿಳಿಸಿದರು.
ಪಟ್ಟಣದ ಸರಸ್ವತಿ ಕಾನ್ವೆಂಟ್‌ನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಆಯೋಜಿಸಿದ್ದ ಶಾಲೆಗೊಂದು ದತ್ತಿ ಕಾರ್ಯಕ್ರಮ ಮತ್ತು ಜನಪದ ಗೀತೆಗಳು ಹಾಗೂ ಭಾವಗೀತೆ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಭೆ ಗುರುತಿಸಲು ಶಿಕ್ಷಕರು ಪ್ರಮುಖ ಪಾತ್ರವಹಿಸಬೇಕೆಂದು ಹೇಳಿ, ಅದಕ್ಕಾಗಿ ಸೂಕ್ತ ವೇದಿಕೆ ಕಲ್ಪಿಸಬೇಕೆಂದು ಸಲಹೆ ನೀಡಿದರು.  ಪ್ರೌಢಶಾಲಾ ಮುಖ್ಯ ಶಿಕ್ಷಕಿ ವಿ.ಸೀತಾಲಕ್ಷ್ಮೀ ಮಾತನಾಡಿ, ಕನ್ನಡ ಕಲಿತರೆ ಸಾಲದು. ಅದನ್ನು ಪ್ರೀತಿಸಬೇಕೆಂದರು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ತಾಲೂಕಿನ ಮಳ್ಳೂರು ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಯು.ಪಿ.ನರಸಿಂಹಮೂರ್ತಿ ಹಾಗೂ ವೀರಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜಯಶ್ರೀ ಅವರನ್ನು ಸನ್ಮಾನಿಸಲಾಯಿತು.  ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಎಸ್.ವಿ.ನಾಗರಾಜ್‌ರಾವ್, ಸರಸ್ವತಿ ಕಾನ್ವೆಂಟ್ ಅಧ್ಯಕ್ಷ ವೆಂಕಟಸುಬ್ಬಾರಾವ್, ಕಾರ್ಯದರ್ಶಿ ಶ್ರೀಕಾಂತ್, ಮುಖ್ಯ ಶಿಕ್ಷಕ ಎಸ್.ಕೆ. ಗೋಪಿನಾಥ್, ತಾಲೂಕು ಅನುದಾನಿತ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ವಿ.ನಾಗರಾಜ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿ. ಕೃಷ್ಣ, ಗೌರವಾಧ್ಯಕ್ಷ ಮಂಜುನಾಥ್, ಮಾಜಿ ಅಧ್ಯಕ್ಷ ವೈ.ಎನ್. ದಾಶರಥಿ, ಶ್ರೀನಿವಾಸ್, ವಿಜಯಕುಮಾರ್, ಶಂಕರ್ ನಾರಾಯಣರಾವ್, ಜಿ.ಎನ್. ಶ್ಯಾಮಸುಂದರ್, ಟಿ. ನಾರಾಯಣಸ್ವಾಮಿ ಭಾಗವಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments