ಪ್ರತಿಯೊಬ್ಬರೂ ಮತ ಚಲಾಯಿಸಿ
ಚಿಂತಾಮಣಿ: ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸಿದಾಗ ಅರ್ಹ ವ್ಯಕ್ತಿಗಳನ್ನು ಚುನಾವಣೆಯಲ್ಲಿ ಆಯ್ಕೆ ಮಾಡಲು ಸಾಧ್ಯವೆಂದು ತಾಲೂಕು ದಂಡಾಧಿಕಾರಿ ಎಂ.ಎನ್. ಮಂಜುನಾಥ್ ಹೇಳಿದರು.
ನಗರಸಭೆ ತಾಲೂಕು ಸಭಾಂಗಣದಲ್ಲಿ ಮತದಾರರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು ದೇಶದ ಪ್ರಜಾಸತ್ತಾತ್ಮಕ, ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳಲ್ಲಿ ಭಾಗವಹಿಸಲು 18 ವರ್ಷ ತುಂಬಿದ ಪ್ರತಿಯೊಬ್ಬರು ಕಡ್ಡಾಯವಾಗಿ ಮತ ಚಲಾಯಿಸಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.