ಬಜೆಟ್ ಅಧಿವೇಶನ ಮುಗಿದ ನಂತರ ಮುಂದಿನ ರಾಜಕೀಯ ನಿರ್ಧಾರ ಪ್ರಕಟ
ಕೋಲಾರ: ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಫೆ.26ರ ನಂತರ ನಿರ್ಧರಿಸುವುದಾಗಿ ಜವಳಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್. ವರ್ತೂರ್ ಪ್ರಕಾಶ್ ತಿಳಿಸಿದರು.
ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಂದಿನ ಚುನಾವಣೆಗೆ ಯಾವುದಾದರೊಂದು ರಾಜಕೀಯ ಪಕ್ಷದಿಂದ ಸ್ಪರ್ಧಿಸಬೇಕೇ ಇಲ್ಲವೇ ಪಕ್ಷೇತರರಾಗಿಯೇ ಕಣಕ್ಕೆ ಇಳಿಯಬೇಕೇ ಎಂಬುದರ ಬಗ್ಗೆ ನನ್ನ ಆಪ್ತ ಬೆಂಬಲಿಗರೊಂದಿಗೆ ಚರ್ಚಿಸಿ, ಫೆ. 26 ನಂತರ ಕೋಲಾರದಲ್ಲಿ ಬೆಂಬಲಿಗರ ಸಭೆ ನಡೆಸಿ ಅಲ್ಲಿ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುವುದಾಗಿ ಹೇಳಿದರು.
ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದ ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ. 13 ಮಂದಿ ಬಿಜೆಪಿ ಶಾಸಕರು ರಾಜಿನಾಮೆ ನೀಡಿದರೂ ಸರ್ಕಾರ ಬೀಳಲ್ಲ. ಫೆ.8 ರಂದು ಬಜೆಟ್ ಮಂಡನೆ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಒಂದು ವೇಳೆ 20 ಮಂದಿ ಬಿಜೆಪಿ ಶಾಸಕರು ರಾಜಿನಾಮೆ ನೀಡಿದಲ್ಲಿ ಮುಂದೆ ಏನು ಮಾಡಬೇಕೆಂಬುದನ್ನು ಯೋಚಿಸುತ್ತೇವೆಂದರು.
ಇನ್ನು 3 ತಿಂಗಳು ಸರ್ಕಾರ ಇರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ವರ್ತೂರ್, ಶಾಸಕರ ರಾಜಿನಾಮೆ ಉರ್ಜಿತವಾಗಲ್ಲ.
ಮುಂದಿನ ಚುನಾವಣೆಗೆ ತಾವು ಯಾವ ಚಿಹ್ನೆ ಮೇಲೆ ಸ್ಪರ್ಧಿಸುತ್ತೀರಾ ಎಂಬುದಕ್ಕೆ ಸಚಿವರು ಸ್ಪಷ್ಟ ಉತ್ತರ ನೀಡಲಿಲ್ಲ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.