ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಹಾರಡಿ ಗ್ರಾಮದಲ್ಲಿ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ

Parashurama
Updated On : 26 Jan 2013, 12:46 pm

ಶಿಡ್ಲಘಟ್ಟ: ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಾಲೆಗೆ ಕಳುಹಿಸುವ ಮೂಲಕ ಅವರ ಭವಿಷ್ಯ ಉಜ್ವಲಗೊಳಿಸಬೇಕೆಂದು ಬೆಂಗಳೂರು ಬಿಎಂಎಸ್ ಕಾಲೇಜಿನ ಪ್ರೊ. ಶಾಮು ತಿಳಿಸಿದರು. ತಾಲೂಕಿನ ಕುಂಬಿಗಾನಹಳ್ಳಿ ಗ್ರಾಮ ಪಂಚಾಯಿತಿಯ ಹಾರಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸ್ವರ್ಣಜಲ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ವತಿಯಿಂದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  ಬೆಂಗಳೂರು ಕೆನರಾ ಬ್ಯಾಂಕ್ ಅಧಿಕಾರಿ ಮಹೇಶ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳನ್ನು ಸ್ಪರ್ಧಾತ್ಮಕವಾಗಿ ಪೈಪೋಟಿ ಮಾಡುವಂತೆ ಶಿಕ್ಷಕರು ತಯಾರು ಮಾಡಬೇಕೆಂದು ಸಲಹೆ ನೀಡಿದ ಅವರು, ಖಾಸಗಿ ಶಾಲೆಗಳ ಪೈಪೋಟಿಯಲ್ಲಿ ಸರ್ಕಾರಿ ಶಾಲೆಗಳು ನಶಿಸುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.   ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅರಿಕೆರೆ ಮುನಿರಾಜು, ನರಸಿಂಹಯ್ಯ ತಾಟಪರ್ತಿ, ಕುಂಬಿಗಾನಹಳ್ಳಿ ಗ್ರಾಪಂ ಅಧ್ಯಕ್ಷೆ ನಾಗವೇಣಿ, ಮಾಜಿ ಅಧ್ಯಕ್ಷ ಸಿದ್ದಲಿಂಗಮೂರ್ತಿ, ಸದಸ್ಯೆ ಶೋಭಾ, ಸಿಆರ್‌ಪಿ ಶ್ರೀರಾಮುಲು, ಶಿವಪ್ರಸಾದ್, ಮುಖ್ಯೋಪಾಧ್ಯಾಯ ಬಸವರಾಜು ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments