ಕಾಡಾನೆ ದಾಳಿಗೆ ಮತ್ತೊಬ್ಬ ಬಲಿ
ಕೆಜಿಎಫ್: ಕಾಡಾನೆ ದಾಳಿಗೆ ಯುವಕನೊಬ್ಬ ಬಲಿಯಾಗಿರುವ ಘಟನೆ ತಾಲೂಕಿನ ಬೇತಮಂಗಲ ಗ್ರಾಮದಲ್ಲಿ ಸೋಮವಾರ ತಡವಾಗಿ ಬೆಳಕಿಗೆ ಬಂದಿದೆ.
ಶಫಿವುಲ್ಲಾ ಅವರ ಮಗ ವಾಸೀಂ (17) ಆನೆ ದಾಳಿಗೆ ಬಲಿಯಾದವನು. ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಈತ ನಲ್ಲೂರು ಗ್ರಾಮದ ನೀಲಗಿರಿ ತೋಪಿನಲ್ಲಿ ಕುರಿಗಳನ್ನು ಮೇಯಿಸುವಾಗ ಆನೆ ದಾಳಿ ನಡೆಸಿರಬಹುದು ಎಂದು ಶಂಕಿಸಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ಬಂಗಾರಪೇಟೆ ತಾಲೂಕಿನ ಕಾಮಸಮುದ್ರಂ ವ್ಯಾಪ್ತಿಯ ಗಡಿಭಾಗ ಮತ್ತು ಬೇತಮಂಗಲ ಹೋಬಳಿಯ ನಲ್ಲೂರು ಗ್ರಾಮದ ನೀಲಗಿರಿ ತೋಪಿನಲ್ಲಿ ಕಾಡಾನೆಗಳು ಕಾಣಿಸಿಕೊಂಡಿದ್ದು, ಇದರಿಂದ ಗ್ರಾಮಸ್ಥರು ಆತಂಕ್ಕೀಡಾಗಿದ್ದಾರೆ.
ಶಫೀವುಲ್ಲಾ ನೀಡಿದ ದೂರಿನ ಮೇರೆಗೆ ಬೇತಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.