ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಇಂದು ಬಿಜೆಪಿಗೆ ಬಿಪಿವಿಎಂ ರಾಜಿನಾಮೆ?

Parashurama
Updated On : 29 Jan 2013, 11:24 am

ಕೋಲಾರ: ಬಂಗಾರಪೇಟೆ ಮಾಜಿ ಶಾಸಕ, ಕವಿಕಾ ಅಧ್ಯಕ್ಷ ಬಿ.ವಿ. ವೆಂಕಟಮುನಿಯಪ್ಪ ಅವರು ಬುಧವಾರ ಬಿಜೆಪಿಗೆ ರಾಜಿನಾಮೆ ನೀಡಲಿದ್ದಾರೆಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಹಾಲಿ ಶಾಸಕ ಎಂ.ನಾರಾಯಣಸ್ವಾಮಿ ಅವರಿಗೆ ಮುಂಬರುವ ಚುನಾವಣೆಗೆ ಟಿಕೆಟ್ ನೀಡಲು ಬಿಜೆಪಿಯ ನಾಯಕರು ನಿರ್ಧರಿಸಿರುವುದರಿಂದ ಅಸಮಾಧಾನಗೊಂಡಿರುವ ವೆಂಕಟಮುನಿಯಪ್ಪ ಪಕ್ಷ ಬಿಡಲು ನಿರ್ಧರಿಸಿ ಈಗಾಗಲೇ ಕ್ಷೇತ್ರದಲ್ಲಿ ತಮ್ಮ ಬೆಂಬಲಿಗರ ಅಭಿಪ್ರಾಯ ಪಡೆದಿರುವುದಲ್ಲದೆ, ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರೊಂದಿಗೂ ಮಾತುಕತೆ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.
ಪ್ರಸ್ತುತ ಜೆಡಿಎಸ್ ವರಿಷ್ಠರು ರಾಜ್ಯ ಪ್ರವಾಸದಲ್ಲಿರುವ ಕಾರಣ ಬುಧವಾರ ಕವಿಕಾ ಅಧ್ಯಕ್ಷ ಸ್ಥಾನಕ್ಕೆ ಮತ್ತು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿ ಫೆ. 5 ಅಥವಾ 6 ರಂದು ಜೆಡಿಎಸ್ ಸೇರ್ಪಡೆಗೆ ನಿರ್ಧರಿಸಿದ್ದಾರೆನ್ನಲಾಗಿದೆ. ಇತ್ತೀಚೆಗೆ ಕೋಲಾರದ ಟಮಕ ಬಳಿ ಹುತ್ತೂರು ಹೋಬಳಿಗೆ ಸೇರಿದ ತಮ್ಮ ಅಪ್ತರೊಂದಿಗೆ ಸಭೆ ನಡೆಸಿ ಬಿಜೆಪಿಯಿಂದ ತಮಗೆ ಅನ್ಯಾಯವಾಗಿದೆ ಎಂದು ಕಣ್ಣಿರು ಹಾಕಿದ್ದ ವೆಂಕಟಮುನಿಯಪ್ಪ, ಬಿಜೆಪಿ ಬಿಡುವ ಸೂಚನೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments