ಜಮೀನು ಜಗಳ: ವ್ಯಕ್ತಿ ಮೇಲೆ ಹಲ್ಲೆ
ಚಿಂತಾಮಣಿ: ಜಮೀನು ವಿಷಯವಾಗಿ ವ್ಯಕ್ತಿಯೊಬ್ಬರ ಮೇಲೆ ದಾಯಾದಿಗಳು ಹಲ್ಲೆ ಮಾಡಿದ ಘಟನೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮರಬಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಮರಬಹಳ್ಳಿ ಗ್ರಾಮದ ಕೃಷ್ಣಪ್ಪ ಎಂಬಾತನು ಹಾಗೂ ದಾಯಾದಿಗಳಾದ ರಘುನಾಥ ಎಂಬವರಿಗೂ ಜಮೀನು ವಿಷಯವಾಗಿ ಮಾತು ಮಾತು ಬೆಳೆದು ಘರ್ಷಣೆಗೆ ಇಳಿದ ಪರಿಣಾಮ ಕೃಷ್ಣಪ್ಪನ ಮೇಲೆ ನರಸಿಂಹಪ್ಪ, ರಾಮಚಂದ್ರ, ವೆಂಕಟರವಣಪ್ಪ, ವಿನೋದಮ್ಮ ಇನ್ನಿತರರು ಸೇರಿ ಹಲ್ಲೆ ಮಾಡಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾನೆ. ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮೊಕ್ಕಾಂ ಹೂಡಿದ್ದಾರೆ. ಕೆಂಚಾರ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.