ಬೈಕ್ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ
ಚಿಂತಾಮಣಿ: ದ್ವಿಚಕ್ರ ವಾಹನಕ್ಕೆ ಮತ್ತೊಂದು ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಕೆಂಚಾರ್ಲಹಳ್ಳಿ ಠಾಣೆ ವ್ಯಾಪ್ತಿಯ ನಂದನಹೊಸಹಳ್ಳಿಯಲ್ಲಿ ನಡೆದಿದೆ. ಗಾಯಗೊಂಡವರ ಪೈಕಿ ಒಬ್ಬನ ಪರಿಸ್ಥಿತಿ ಗಂಭೀರವಾಗಿದೆ. ತಾಲೂಕಿನ ದೊಡ್ಡಹಳ್ಳಿ ಗ್ರಾಮದ ವೆಂಕಟರೆಡ್ಡಿ ಎಂಬಾತ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ, ಕಟ್ಟಿಗೇನಹಳ್ಳಿ ಗ್ರಾಮದ ಶ್ರೀನಿವಾಸ ಎದುರುಗಡೆಯಿಂದ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
ವೆಂಕಟರೆಡ್ಡಿ ಅವರ ಪರಿಸ್ಥಿತಿ ಚಿಂತಾಜನಕವಾಗಿದ್ದು ಈತನನ್ನು ಕೂಡಲೇ ಕೋಲಾರ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ರವಾನಿಸಿರುವುದಾಗಿ ತಿಳಿದು ಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.