ಬೈಕ್ ಸವಾರ ಸಾವು
ಕೆಜಿಎಫ್: ಕಾರು- ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಮೆಲ್‌ನಗರ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಎಚ್‌ಬಿಆರ್ ಲೇಔಟ್ ನಿವಾಸಿ ಮುರಳಿ(55) ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಕಮ್ಮಸಂದ್ರ ಗ್ರಾಮದ ಶಾಲೆಯಲ್ಲಿ ಓದುತ್ತಿರುವ ತಮ್ಮ ಮಕ್ಕಳನ್ನು ನೋಡಿಕೊಂಡು ದ್ವಿಚಕ್ರ ವಾಹನದಲ್ಲಿ ಹಿಂತಿರುಗುತ್ತಿದ್ದಾಗ ಕೃಷ್ಣಾವರಂ ಸಮೀಪವಿರುವ ಹ್ಯಾಪಿಹೋಂ ಬಳಿ ಎದುರುಗಡೆಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮುರಳಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಬೆಮೆಲ್‌ನಗರ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಲಾರಿ ಚಾಲಕನ ಕೊಲೆ
ಕೆಜಿಎಫ್: ಲಾರಿ ಚಾಲಕನೊಬ್ಬನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮಾರಿಕುಪ್ಪಂ ಪೊಲೀಸ್ ಠಾಣಾ ವ್ಯಪ್ತಿಯ ಕೆಂಪೈಪುರ ಗ್ರಾಮದ ನಿವಾಸಿ ನಾರಾಯಣರೆಡ್ಡಿ(40) ಕೊಲೆಗೀಡಾದ ವ್ಯಕ್ತಿ. ನಾರಾಯಣರೆಡ್ಡಿ ಎಂಬಾತನು ಬೆಂಗಳೂರಿನಲ್ಲಿ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಸೋಮವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದಾಗ ಚಿಕ್ಕಕಲ್ಲಹಳ್ಳಿ ಗ್ರಾಮದ ಸಮೀಪ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿದ್ದಾರೆ. ಮಾರಿಕುಪ್ಪಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.