ಮಹಿಳೆಯರ ಮಾರಾಟ: ಪ್ರಮುಖ ಆರೋಪಿ ಸೆರೆ
ಚಿಕ್ಕಬಳ್ಳಾಪುರ: ಮಹಿಳೆ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಲಕ್ಷ್ಮಿಪತಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದು, ಇದೀಗ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ.
ತಾಲೂಕಿನ ಗುಂಡ್ಲಮಂಡಿಕಲ್ ಗ್ರಾಮದ ಯುವತಿಯೊಬ್ಬಳು ನಗರದ ಹಳೆಯ ಬಸ್ ನಿಲ್ದಾಣದಲ್ಲಿ ನಿಂತಿದ್ದ ಸಂದರ್ಭದಲ್ಲಿ ಮಾತನಾಡಿಸಿದ ಆರೋಪಿ, ಕೆಲಸ ಕೊಡಿಸುವ ಭರವಸೆ ನೀಡಿದ್ದ. ಆಕೆಯನ್ನು ಬಾಗೇಪಲ್ಲಿಗೆ ಕರೆದುಕೊಂಡು ಹೋಗಿ ಡೆಲ್ಲಿ ಬುವಮ್ಮ, ಶಕೀನಾ ಮತ್ತು ರೇಷ್ಮಾ ಎಂಬವರಿಗೆ ಪರಿಚಯಿಸಿದ್ದ. ಅವರು ದೆಹಲಿಗೆ ಕರೆದುಕೊಂಡು ಆಕೆಯನ್ನು ವೇಶ್ಯಾವಾಟಿಕೆಗೆ ಮಾರಾಟ ಮಾಡಿದ್ದರು. ಕೊನೆಗೆ ಯುವತಿ ತನ್ನ ಗಂಡನ ಮೂಲಕ ನಡೆದ ಘಟನೆಯನ್ನೆಲ್ಲಾ ಪೊಲೀಸರಿಗೆ ಮುಟ್ಟಿಸಿದ್ದು, ಇದರಿಂದ ಕಾರ್ಯಪ್ರವೃತ್ತರಾಗಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ಮೂವರು ಮಹಿಳೆಯರನ್ನು ಬಂಧಿಸಿದ್ದರು. ಆದರೆ, ಪ್ರಮುಖ ಆರೋಪಿಯಾದ ಲಕ್ಷ್ಮೀಪತಿ ತಲೆಮರೆಸಿಕೊಂಡಿದ್ದ. ಈತನ ಪತ್ತೆಗೆ ಜಾಲ ಬೀಸಿದಾಗ ರಾಜಧಾನಿ ಬೆಂಗಳೂರಿನಲ್ಲಿ ಸಿಕ್ಕಿ ಬಿದ್ದಿದ್ದಾನೆ. ಘಟನೆಯ ನಂತರ ಶಬರಿಮಲೆ ಸೇರಿದಂತೆ ಬೇರೆ ಬೇರೆ ಕಡೆಯೆಲ್ಲಾ ಸುತ್ತಾಡಿಕೊಂಡು ಬಂದು ಬೆಂಗಳೂರಿನಲ್ಲಿ ಅವಿತುಕೊಂಡಿದ್ದ. ಈತನ ಸುಳಿವನ್ನು ಪತ್ತೆ ಹಚ್ಚಿದ ಪೊಲೀಸರು, ಇದೀಗ ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಧೀಶರು ಲಕ್ಷ್ಮೀಪತಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.