ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

'ಮಳೆ ನೀರು ಬಯಲುಸೀಮೆಗೆ ಹರಿಸಿ'

Vishwanath S
Updated On : 7 Jul 2013, 12:40 pm

ಕ.ಪ್ರ.ವಾರ್ತೆ ,  ಕೋಲಾರ ,  ಜು.6
ಕರಾವಳಿ ಭಾಗದಲ್ಲಿ ಸುರಿಯುವ ಮಳೆಯ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿದ್ದು, ಈ ನೀರನ್ನು ಬಯಲು ಸೀಮೆ ಜಿಲ್ಲೆಗಳಿಗೆ ಹರಿಸಬೇಕೆಂದು ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಅನೇಕ ವರ್ಷಗಳಿಂದ ಶಾಶ್ವತ ನೀರಾವರಿಗಾಗಿ ಹೋರಾಟ ನಡೆಯುತ್ತಿದ್ದು ಯಾವುದೇ ಸರ್ಕಾರ ಜನತೆಯ ಸಮಸ್ಯೆ ನಿವಾರಣೆ ಮಾಡಲಾಗಿಲ್ಲ, ಕಾಂಗ್ರೆಸ್ ನೇತೃತ್ವದ ಸರ್ಕಾರ ಚುನಾವಣೆ ಪ್ರಾಣಾಳಿಕೆಯಲ್ಲಿ ನೀಡಿರುವ ಭರವಸೆಯನ್ನು ಈಡೇರಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ ಜನರು ವರ್ಷದ ಆರು ತಿಂಗಳ ಕಾಲ ಮಳೆಯ ಪ್ರವಾಹಕ್ಕೆ ತುತ್ತಾಗಿ ಅಪಾರ ನಷ್ಟವನ್ನು ಅನುಭವಿಸುತ್ತಿದ್ದಾರೆ, ಸಾವಿರಾರು ಟಿ.ಎಂ.ಸಿ ನೀರು ಸಮುದ್ರ ಪಾಲಾಗುತ್ತಿದೆ, ರಾಜ್ಯದ ಬಯಲು ಸೀಮೆಯ ಜನ ಶುದ್ಧವಾದ ನೀರಿಲ್ಲದೆ ರೋಗ ರುಜುನುಗಳಿಂದ ಬಳಲುತ್ತಿರುವುದರಿಂದ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಶಾಶ್ವತ ನೀರಾವರಿ ಯೋಜನೆಗೆ ಹೆಚ್ಚಿನ ಅನುದಾನ ಮೀಸಲಿಟ್ಟು ತ್ವರಿತಗತಿಯಲ್ಲಿ ಯೋಜನೆ ಜಾರಿಗೆ ತರಬೇಕೆಂದು ಒತ್ತಾಯಿಸಿದರು.
ಕೋಲಾರ ಜಿಲ್ಲೆಗೆ ಶಾಶ್ವತ ನೀರಾವರಿ ಸೌಕರ್ಯ ಕಲ್ಪಿಸಿದಲ್ಲಿ ಸಮಗ್ರ ಅಭಿವೃದ್ಧಿಗೆ ಸಹಾಯವಾಗುತ್ತದೆ, ರಾಜ್ಯ ಸರ್ಕಾರ ಕೆರೆಗಳ ಅಭಿವೃದ್ಧಿ, ರೈತರ ಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜಿಲ್ಲೆಯನ್ನು ಉಳಿಸಬೇಕೆಂದು ಜಿಲ್ಲಾ ಪ್ರಭಾರ ಜಿಲ್ಲಾಧಿಕಾರಿಗಳಾದ ಅಪರ ಜಿಲ್ಲಾಧಿಕಾರಿ ಡಾ. ವೆಂಕಟೇಶಮೂರ್ತಿ ಅವರಿಗೆ ಮನವಿ ಸಲ್ಲಿಸಿ, ಮುಖ್ಯಮಂತ್ರಿಗಳಿಗೆ ಕಳುಹಿಸುವಂತೆ ಕೋರಿದರು.
ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಕೆ. ಶ್ರೀನಿವಾಸಗೌಡ, ನಾರಾಯಣ ಗೌಡ, ಹೂಲ್ಕೂರು ಹರಿ ಕುಮಾರ್, ಮೂರಡಂಹಳ್ಳಿ ಶಿವಾರೆಡ್ಡಿ, ಹೂವಳ್ಳಿ ನಾಗರಾಜ್, ರಂಜಿತ್‌ಕುಮಾರ್, ನೀಲಕಂಠಪುರ ಮುನೇಗೌಡ, ತೇರನಹಳ್ಳಿ ಅಂಜಿನಪ್ಪ, ಬಂಗೋದಿ ನಾಗರಾಜ ಗೌಡ, ಐತಂಡಹಳ್ಳಿ ಉದಯ್, ಮರಗಲ್ ಶ್ರೀನಿವಾಸ್, ಕಾರಿ ವಿಶ್ವನಾಥ್, ಕ್ಯಾಸಂಬಳ್ಳಿ ಪ್ರತಾಪ್, ಬೇತಮಂಗಲ ಮಂಜು, ಬಂಗಾರಪೇಟೆ ನಾರಾಯಣ ಸ್ವಾಮಿ, ಅಬಿದ್ ಉಲ್ಲಾ ಖಾನ್, ಈ ಕಬಂಹಳ್ಳಿ ಮಂಜುನಾಥ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement