ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

'ಜೀತ ವಿಮುಕ್ತರಿಗೆ ಪ್ರತ್ಯೇಕ ಹಣವಿರಿಸಿ'

Vishwanath S
Updated On : 8 Jul 2013, 12:56 pm

ಶಿಡ್ಲಘಟ್ಟ:  2013ನೇ ಸಾಲಿನ ಬಜೆಟ್‌ನಲ್ಲಿ ಜೀತ ವಿಮುಕ್ತರ ಅಭ್ಯುದಯಕ್ಕೆ ಪ್ರತ್ಯೇಕ ಹಣ ಮೀಸಲಿಡಬೇಕೆಂದು ಒತ್ತಾಯಿಸಿ ತಾಲೂಕು ಕಚೇರಿ ಎದುರು ಕರ್ನಾಟಕ ಜೀತ ವಿಮುಕ್ತರ ಒಕ್ಕೂಟ ಸದಸ್ಯರು ಶನಿವಾರ ಪ್ರತಿಭಟನೆ ನಡೆಸಿದರು.
ಸಂಘದ ಜಿಲ್ಲಾ ಸಂಚಾಲಕ ರಾಮಸ್ವಾಮಿ ಮಾತನಾಡಿ, ಜೀತ ಪದ್ಧತಿ ಹಾಗೂ ಬಾಲ ಕಾರ್ಮಿಕರ ನಿರ್ಮೂಲನೆಗಾಗಿ 20 ವರ್ಷಗಳಿಂದ ಕೆಲಸ ಮಾಡುತ್ತಿದೆ. ಇದುವರೆಗೂ ಹಲವು ಜೀತದಾಳುಗಳ ಅಹವಾಲು ಸರ್ಕಾರಕ್ಕೆ ಸಲ್ಲಿಸಿದರೂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಸೌಲಭ್ಯ ಸಿಗದೇ ಪರದಾಡುವಂತಾಗಿದೆ ಎಂದು ಆರೋಪಿಸಿದರು.
ಇದೇ ಸಂದರ್ಭ ಮನವಿ ಪತ್ರವನ್ನು ತಹಸೀಲ್ದಾರ್ ರಮೇಶ್ ಅವರಿಗೆ ಅರ್ಪಿಸಲಾಯಿತು. ಸಂಘಟನೆ ತಾಲೂಕು ಸಂಚಾಲಕ ರವಿಕುಮಾರ್, ಮಹಿಳಾ ಘಟಕದ ಸಂಚಾಲಕಿ ಶಶಿಕಲಾ, ಒಕ್ಕೂಟದ ಅಧ್ಯಕ್ಷ ನರಸಿಂಹಪ್ಪ, ಕಾರ್ಯಕರ್ತರಾದ ಮುನಿರಾಜು, ಬಾಲರಾಜು ಮತ್ತಿತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement