ಬಜೆಟ್ನಲ್ಲಿ ಶಾಶ್ವತ ನೀರಾವರಿಗೆ ಹೆಚ್ಚಿನ ಹಣ ಮೀಸಲಿಗೆ ಒತ್ತಾಯ
ಕೋಲಾರ: ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಜಾರಿಗಾಗಿ ಬಜೆಟ್ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಬೇಕೆಂದು ಕರ್ನಾಟಕ ದಲಿತ ಸಿಂಹ ಸೇನೆ ಜಿಲ್ಲಾಧ್ಯಕ್ಷ ಸೂಲಿಕುಂಟೆ ಆನಂದ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕೋಲಾರ ಜಿಲ್ಲೆಯು ರಾಜ್ಯ ಕಂಡ ಅತ್ಯಂತ ಬರಪೀಡಿತ ಪ್ರದೇಶ. ಇಲ್ಲಿ ಕೃಷಿಯೇ ಪ್ರಧಾನ. ರೈತರ ಉಳಿವಿಗಾಗಿ ಮತ್ತು ಕುಡಿಯಲು ಶುದ್ಧ ನೀರು ಪೂರೈಕೆಗಾಗಿ ಸರ್ಕಾರ ಶಾಶ್ವತ ನೀರಾವರಿ ಯೋಜನೆ ಜಾರಿ ಮಾಡಲೇಬೇಕೆಂದು ಆಗ್ರಹಿಸಿದ್ದಾರೆ.
ರಾಜ್ಯದ ಜನತೆ ಈ ಬಾರಿ ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆಯಿಟ್ಟು ಹೆಚ್ಚಿನ ಸ್ಥಾನಗಳನ್ನು ಒದಗಿಸಿಕೊಟ್ಟು ರಾಜ್ಯದ ಆಡಳಿತ ಚುಕ್ಕಾಣಿಯನ್ನು ಹಿಡಿಯುವಂತೆ ಮಾಡಿರುವ ಈ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ನೀರಿಗಾಗಿ ಹೆಚ್ಚಿನ ಹಣ ಒದಗಿಸುವ ಮೂಲಕ ಭರವಸೆ ಈಡೇರಿಸಬೇಕೆಂದು ಕೋರಿದ್ದಾರೆ.
ಈ ಬಾರಿಯ ಬಜೆಟ್ನಲ್ಲಿ ಜಿಲ್ಲೆಗೆ ಅನ್ಯಾಯ ಕಂಡಲ್ಲಿ ಸಂಘಟನೆಯಿಂದ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.