ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ

Mainashree
Updated On : 9 Jul 2013, 12:11 pm

ಚಿಂತಾಮಣಿ: ಶಾಶ್ವತ ನೀರಾವರಿ ಯೋಜನೆ ಜಾರಿ, ಡಾ.ಪರಮಶಿವಯ್ಯ ವರದಿಯನ್ನು ಬಜೆಟ್‌ನಲ್ಲಿ ಅನುಮೋದಿಸಿ, ಬರಪೀಡಿತ ಜಿಲ್ಲೆಗಳಿಗೆ ಹೆಚ್ಚು ಅನುದಾನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲೂಕು ರೈತ ಸಂಘ ಹಾಗೂ ಹಸಿರು ಸೇನೆ ನೂರಾರು  ಕಾರ್ಯಕರ್ತ ಇಲ್ಲಿನ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ತಾಲೂಕು ರೈತ ಸಂಘ ಹಾಗೂ ಹಸಿರು ಸೇನೆ ನೂರಾರು  ಕಾರ್ಯಕರ್ತರು ಸೇರಿ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಗೊಳಿಸಿ ಎಂದು ಆಗ್ರಹಿಸಿ ಹಾಗೂ ಬಜೆಟ್‌ನಲ್ಲಿ ಅನುಮೋದನೆ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಸರ್ಕಾರದ ವಿರುದ್ಧ ಆಕ್ರೋಶ: ತಾಲೂಕು ರೈತ ಸಂಘದ ಅಧ್ಯಕ್ಷ ಜೆ.ವಿ.ರಘುನಾಥರೆಡ್ಡಿಮಾತನಾಡಿ, ಕಳೆದ ಹಲವು ವರ್ಷಗಳಿಂದ ಸಂಘಟನೆ ಹೋಬಳಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ಶಾಶ್ವತ ನೀರಾವರಿ ಹೋರಾಟಕ್ಕಾಗಿ ಹಂತ ಹಂತವಾಗಿ ಕಾರ್ಯಕ್ರಮ ನಡೆಸುತ್ತಿದ್ದರೂ, ರೈತರ ಸಮಸ್ಯೆಗೆ ಸ್ಪಂದಿಸದ ಜನಪ್ರತಿನಿಧಿಗಳು ಹಾಗೂ ಸರ್ಕಾರ ನೀರನ್ನು ಕಲ್ಪಿಸಿಕೊಡುವಲ್ಲಿ ವಿಫಲಗೊಂಡಿದೆ ಎಂದು ಆರೋಪಿಸಿದರು.
ಬಯಲು ಸೀಮೆಯ ಜನ ಪ್ಲೋರೈಡ್ ಮುಕ್ತ ವಿಷನೀರು ಕುಡಿದು ವಿವಿಧ ರೋಗ ರಜನೆಗಳಿಗೆ ಈಡಾಗಿ ಮೂಳೆ,ಕಣ್ಣು,ಚರ್ಮ ಸೇರಿದಂತೆ ಇನ್ನೂ ಹಲವಾರು ರೋಗಗಳು ಪ್ಲೋರೈಡಡ್ನೀರಿನಿಂದ ಆಗುವ ಅನಾಹುತವನ್ನು ತಪ್ಪಿಸಿ ಈ ಭಾಗದ ಜನರಿಗೆ ಶಾಶ್ವತ ನೀರಾವರಿ ಯೋಜನೆಗೆ ಚಾಲನೆ ನೀಡಬೇಕೆಂದು ಆಗ್ರಹಿಸಿದರು.
ಸರ್ಕಾರಿ ಬಸ್ಸುಗಳ ಕೊರತೆ: ಗ್ರಾಮೀಣ ಭಾಗಗಳಿಂದ ಬರುವ ಬಸ್ಸುಗಳ ಸಂಚಾರದ ಅಭಾವವಿರುವುದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ.
 ಸಂಬಂಧಪಟ್ಟ ಡಿಪೋ ವ್ಯವಸ್ಥಾಪಕರು ಖಾಸಗಿ ಬಸ್ಸುಗಳ ಮಾಲೀಕರ ಜೊತೆ ಶಾಮೀಲಾಗಿ ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಗ್ರಾಮಾಂತರ ಪ್ರದೇಶಗಳಿಗೆ ಕೆಂಪು ಬಸ್ಸುಗಳು ಕಡಿಮೆಯಾಗಿ ಖಾಸಗಿ ಬಸ್ಸುಗಳು ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ತಾಲ್ಲೂಕು ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಆರೋಪಿಸಿದ್ದಾರೆ.
ನಂತರ 7ಕ್ಕೂ ಹೆಚ್ಚು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ತಾಲ್ಲೂಕು ದಂಡಾಧಿಕಾರಿಗಳ ಪರವಾಗಿ ಉಪ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement