ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಭ್ರಷ್ಟ ಅಧಿಕಾರಿಗಳ ಎತ್ತಂಗಡಿಗೆ ದಲಿತ ಸಂಘರ್ಷ ಸಮಿತಿ ಆಗ್ರಹ

Mainashree
Updated On : 9 Jul 2013, 12:12 pm

ಚಿಂತಾಮಣಿ: ತಾಲೂಕು ಸಮಾಜ ಕಲ್ಯಾಣ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ಮೂಲ ಸೌಕರ್ಯ ಕೊರತೆಗೆ ಕಾರಣರಾಗಿರುವ ಅಧಿಕಾರಿಗಳ ವಿರುದ್ಧ ದಸಂಸ ಕಾರ್ಯಕರ್ತರು ಮೌನ ಪ್ರತಿಭಟನೆ ಮೆರವಣಿಗೆ ನಡೆಸಿ ತಾಲೂಕು ಆಡಳಿತಕ್ಕೆ  ಮನವಿ ಪತ್ರ ಸಲ್ಲಿಸಿದರು.
ಪಟ್ಟಣದಲ್ಲಿ ವಿವಿಧ ಪ್ರಮುಖ ರಸ್ತೆಗಳಲ್ಲಿ ದಸಂಸ ಕಾರ್ಯಕರ್ತರು ಮೌನ ಪ್ರತಿಭಟನೆ ಮೆರವಣಿಗೆ ನಡೆಸಿ ತಾಲೂಕು ಕಚೇರಿ ಮುಂಭಾಗದಲ್ಲಿ ಸೇರಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ ಹಾಗೂ ಮೂಲಭೂತ ಸೌಕರ್ಯಗಳ ಕೊರತೆಗೆ ಕಾರಣರಾಗಿರುವ ಭ್ರಷ್ಟ ಅಧಿಕಾರಿಗಳನ್ನು ಎತ್ತಂಗಡಿ ಮಾಡಿ ಎಂದು ಆಗ್ರಹಿಸಿ ಮೌನ ಪ್ರತಿಭಟನೆ ನಡೆಸಿದರು. ಜಿಲ್ಲಾ ಸಂಚಾಲಕ ವಿ.ನರಸಿಂಹಪ್ಪ ಮಾತನಾಡಿ,  ದಲಿತರ ಏಳಿಗೆಗಾಗಿ ಹಾಗೂ ಅವರ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರ ಹೆಚ್ಚು ಅನುದಾನ ನೀಡುತ್ತಿದ್ದರೂ, ಹಲವು ಅಧಿಕಾರಿಗಳ ಬೇಜವಾಬ್ದಾರಿತನದಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆಯೆಂದು ಆರೋಪಿಸಿದ್ದಾರೆ.  ವಿದ್ಯಾರ್ಥಿ ನಿಲಯಗಳಲ್ಲಿ ಅವ್ಯವಸ್ಥೆ ಬಗ್ಗೆ ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು 11 ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ತಾಲೂಕು ದಂಡಾಧಿಕಾರಿಗೆ ಮನವಿ ಪತ್ರ ನೀಡಿದರು.
ದಸಂಸ ಸಮಿತಿ ಮುಖಂಡರಾದ ರಾಜಣ್ಣ ಸೂಲದೇನಹಳ್ಳಿ, ರಾಮಾಂಜನಪ್ಪ,ನಾಗರಾಜ,ಗಂಗಾಧರಪ್ಪ,ನರಸಿಂಹಪ್ಪ, ವೆಂಕಟರವಣ, ಬಸಪ್ಪ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement