ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಪಂಕ್ತಿ ಭೇದದ ವಿರುದ್ಧ ಸಿಪಿಎಂ ಪ್ರತಿಭಟನೆ

Mainashree
Updated On : 10 Jul 2013, 12:02 pm

ಗುಡಿಬಂಡೆ: ಉಡುಪಿಯ ಶ್ರೀ ಕೃಷ್ಣ ಮಠ, ಕುಕ್ಕೆ ಸುಬ್ರಮಣ್ಯ ದೇವಸ್ಥಾನಗಳಲ್ಲಿ ನಡೆಯುತ್ತಿರುವ ಪಂಕ್ತಿ ಬೇಧದ ವಿರುದ್ಧ ತಾಲೂಕು ಸಿಪಿಎಂ ಘಟಕ ಪಟ್ಟಣ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿತು.
ಇದೇ ವೇಳೆ ಮಾತನಾಡಿದ ಪಕ್ಷದ ತಾಲೂಕು ಕಾರ್ಯದರ್ಶಿ ಜಯರಾಮರೆಡ್ಡಿ ರಾಜ್ಯದ ಸುಮಾರು 168 ದೇವಾಲಯಗಳಲ್ಲಿ ಇಂತಹ ಅನಿಷ್ಠ ಪದ್ಧತಿಯನ್ನು ಆಚರಿಸಲಾಗುತ್ತಿದೆ. ಮಡೆಸ್ನಾನ  ಪಂಕ್ತಿಬೇಧ ಮುಂತಾದ ಆಚರಣೆಗಳಿಂದ ದಲಿತರನ್ನು ಹೀನಾಯವಾಗಿ ಕಾಣಲಾಗುತ್ತಿದೆ. ಸರ್ಕಾರ ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕಾಗಿದೆಯೆಂದು ನುಡಿದ ಅವರು, ದಲಿತರ ಸಬಲೀಕರಣಕ್ಕಾಗಿ ಪಕ್ಷ ಹಲವಾರು ಹೋರಾಟಗಳನ್ನು ಮಾಡಿಕೊಂಡು ಬರುತ್ತಿದೆ ಎಂದರು.ನಂತರ ತಮ್ಮ ಹಲವಾರು ಬೇಡಿಕೆಗಳನ್ನು ಈಡೇರಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಹೆಚ್.ಪಿ. ಲಕ್ಷ್ಮೀನಾರಾಯಣ, ಶಿವಪ್ಪ, ರಾಮನಾಥ್ ಸೇರಿದಂತೆ ಅನೇಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement