ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಂಸತ್ ಚುನಾವಣೆ ಬಳಿಕವೇ ಕೈ ಸೇರ್ಪಡೆ: ವರ್ತೂರ್ ಘೋಷಣೆ

Rashmi Kasaragodu
Updated On : 11 Jul 2013, 1:16 am

ಕೋಲಾರ: ನನ್ನ ಮೈಯಲ್ಲಿ ಹರಿಯುತ್ತಿರುವುದು ಕಾಂಗ್ರೆಸ್ ಬ್ಲಡ್, ಲೋಕಸಭಾ ಚುನಾವಣೆ ನಂತರವಷ್ಟೇ ನಾನು ಕಾಂಗ್ರೆಸ್ ಸೇರುತ್ತೇನೆ ಎಂದು ಕೋಲಾರ ಕ್ಷೇತ್ರದ ಪಕ್ಷೇತರ ಶಾಸಕ ಆರ್. ವರ್ತೂರ್ ಪ್ರಕಾಶ್ ಘೋಷಿಸಿದ್ದಾರೆ.
ಅವರು ಬುಧವಾರ ನಗರದ ಟಿ.ಚನ್ನಯ್ಯ ರಂಗಮಂದಿರಲ್ಲಿ ಹಮ್ಮಿಕೊಂಡಿದ್ದ ಅನ್ನ ಭಾಗ್ಯ ಯೋಜನೆ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರಣಾಂತರಗಳಿಂದ ಎರಡು ಬಾರಿ ಪಕ್ಷೇತರ ಶಾಸಕನಾಗಿದ್ದೇನೆ. ಕಾಂಗ್ರೆಸ್ ಸೇರುವಂತೆ ರೆಡ್‌ಕಾರ್ಪೆಟ್ ಹಾಕಿ ಆಹ್ವಾನಿಸಲಾಗುತ್ತಿದೆ. ಆದರೆ, ಈಗ ಸೇರಲ್ಲ.  ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್ ಸೇರುವೆ ಎಂದು ಮಾರ್ಮಿಕವಾಗಿ ನುಡಿದರಲ್ಲದೆ ರಾಜ್ಯದಲ್ಲಿ ಮುಂದೆ ನಾನೇ ಕಾಂಗ್ರೆಸ್ ಮುಖ್ಯಮಂತ್ರಿ ಆಗುತ್ತೇನೆಂದು ಹೊಸ ಬಾಂಬ್ ಸಿಡಿಸಿದರು.
ರಾಜ್ಯದಲ್ಲಿ ಅನೇಕರು ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿದ್ದರೂ ಅವರಿಗೆ ಸಾಮಾಜಿಕ ಕಾಳಜಿ ಅಷ್ಟಾಗಿ ಇರಲಿಲ್ಲ, ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗಕ್ಕೆ ಸೇರಿದವರಾಗಿರುವುದರಿಂದ ಬಡವರ ಪರ ಕಾಳಜಿವಹಿಸಿ ಕೆಲಸ ಮಾಡುತ್ತಿದ್ದಾರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement