ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಆಧಾರ್ ನೋಂದಣಿ ಕೇಂದ್ರ ತೆರೆಯಲು ಆಗ್ರಹ

Rashmi Kasaragodu
Updated On : 12 Jul 2013, 12:19 pm

ಕೆಜಿಎಫ್:  ಕೆಜಿಎಫ್ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಆಧಾರ್ ನೋಂದಣಿ ಕೇಂದ್ರಗಳನ್ನು ಪ್ರಾರಂಭಿಸುವಂತೆ ಆಗ್ರಹಿಸಿ ನವಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಎಸ್.ಎಸ್.ರಾಜಗೋಪಾಲಗೌಡ ಅವರ ನೇತೃತ್ವದಲ್ಲಿ ನಗರದ ನಾಡ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಕೆಜಿಎಫ್‌ನಲ್ಲಿ ಕಳೆದ 20 ದಿನಗಳಿಂದ ಆದಾರ್ ಕಾರ್ಡ್ ನೋಂದಣಿ ಕೇಂದ್ರ ಪ್ರಾರಂಭಿಸಿದ್ದು, ನಗರದ ಜನತೆಗೆ ಹೆಚ್ಚು ಅನುಕೂಲವಾಗಿದೆ. ಆದರೆ, ನಗರ ಮತ್ತು ಗ್ರಾಮೀಣ ಭಾಗದ ಜನತೆಗೆ ಒಂದೇ ಕೇಂದ್ರ ಇರುವುದರಿಂದ ಬೆಳಗ್ಗೆಯಿಂದ ಸಂಜೆವರೆಗೆ ಸಾಲಿನಲ್ಲಿ ಹೆಚ್ಚು ಮಂದಿ ನಿಲ್ಲುವುದರಿಂದ ಕೆಲಸ ವಿಳಂಭವಾಗುತ್ತಿದೆ. ಗ್ರಾಮೀಣ ಪ್ರದೇಶದವರು ಆಧಾರ್ ಕಾರ್ಡ್‌ಗಳ ನೋಂದಣಿಗೆ 2-3 ದಿನ ಅಲೆದಾಡುವಂತಾಗಿದೆ ಎಂದು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.
ಕೂಡಲೇ ಜಿಲ್ಲಾಧಿಕಾರಿ ಆಧಾರ್ ನೋಂದಣಿ ಕೇಂದ್ರಗಳನ್ನು ಕೆಜಿಎಫ್ ಕ್ಷೇತ್ರದ ಬೇತಮಂಗಲ ಮತ್ತು ಕ್ಯಾಸಂಬಳ್ಳ, ಆಂಡರ್‌ಸನ್‌ಪೇಟೆ ಹೋಬಳಿಗಳಲ್ಲಿ ಆಧಾರ್ ಸೇವೆ ಪ್ರಾರಂಭಿಸಬೇಕು. ಇಲ್ಲವಾದಲ್ಲಿ ನವಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಎಚ್ಚರಿಸಿದರು.
ನಾಡ ಕಚೇರಿಯ ಉಪ ತಹಸೀಲ್ದಾರ್ ಇನಾಯತ್ ಉಲ್ಲಾ ಖಾನ್ ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ವೇದಿಕೆ ಜಿಲ್ಲಾಧ್ಯಕ್ಷ ಚಿನ್ನವೆಂಕಟೋಶ್, ಪ್ರಧಾನ ಕಾರ್ಯದರ್ಶಿ ಅಶೋಕ್‌ಕುಮಾರ್, ಜಿಲ್ಲಾ ಕಾರ್ಯದರ್ಶಿ ಪ್ರೇಮ್, ಉಪಾಧ್ಯಕ್ಷ ಕೆ.ಸೋಮನಾಥ್, ನಗರ ಘಟಕದ ಅಧ್ಯಕ್ಷ ರಾಜ, ಮುನಿಸ್ವಾಮಿ, ಚೆನ್ನಕೇಶವ, ರಮೇಶ್, ಕಾರ್ಯಕರ್ತರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement