ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಶಾಶ್ವತ ನೀರಾವರಿ ಜಾರಿಗೆ ಸದನದಲ್ಲಿ ಒತ್ತಾಯಿಸುವೆ; ಶಾಸಕ ವರ್ತೂರ್

Rashmi Kasaragodu
Updated On : 12 Jul 2013, 12:19 pm

ಕ.ಪ್ರ.ವಾರ್ತೆ   ಕೋಲಾರ   ಜು. 11
ಶುಕ್ರವಾರ ಆರಂಭವಾಗುವ ಬಜೆಟ್ ಅಧಿವೇಶನದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸುವ ಸಲುವಾಗಿ ಹೆಚ್ಚಿನ ಕಾಳಜಿ ವಹಿಸಿ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಹಣಕಾಸು ಇಲಾಖೆಯ ಜವಾಬ್ದಾರಿಯನ್ನು ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಆಗ್ರಹಿಸುವುದಾಗಿ ಶಾಸಕ ಆರ್. ವರ್ತೂರು ಪ್ರಕಾಶ್ ತಿಳಿಸಿದರು.
ತಾಲೂಕಿನ ವಕ್ಕಲೇರಿಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವೆಂಕಟಾಚಲಯ್ಯ ಅವರನ್ನು ತಮ್ಮ ಬಣಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ಡಾ. ಪರಮಶಿವಯ್ಯ ವರದಿ ಜಾರಿಗೆ ಅಗತ್ಯವಿರುವ ಅನುದಾನವನ್ನು ಬಜೆಟ್‌ನಲ್ಲೇ ಹೆಚ್ಚಾಗಿ ಘೋಷಿಸುವ ಮೂಲಕ ಯೋಜನೆ ಜಾರಿಗೆ ಸಹಕರಿಸುವಂತೆ ಮನವಿ ಮಾಡುವುದಾಗಿ ಭರವಸೆ ನೀಡಿದರು.
ಅವಿಭಜಿತ ಜಿಲ್ಲೆಗಳ ಶಾಸಕರು ಸಹ ಶಾಶ್ವತ ನೀರಾವರಿ ವಿಚಾರದಲ್ಲಿ ಒಗ್ಗಟ್ಟಾಗಿ ಹೋರಾಟ ನಡೆಸುವುದಾಗಿ ಹೇಳಿದರಲ್ಲದೆ, ಈಗಾಗಲೇ ಕೋಲಾರ ಜಿಲ್ಲೆಯ ಶಾಸಕರು ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಶಾಶ್ವತ ನೀರಾವರಿ ಯೋಜನೆಗೆ ಸಂಕಲ್ಪ ಮಾಡಿರುವುದಾಗಿ ಹೇಳಿದರು.
ಕ್ಷೇತ್ರದಲ್ಲಿ ಈಗಾಗಲೇ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳು ಮತ್ತು ವಿವಿಧ ಇಲಾಖೆಗಳ ಸಚಿವರ ಸಹಕಾರದೊಂದಿಗೆ ಮತ್ತಷ್ಟು ಅನುದಾನವನ್ನು ಕ್ಷೇತ್ರಕ್ಕೆ ತಂದು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಹೆಚ್ಚಿನ ಒತ್ತು ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಬೆಗ್ಲಿ ಪ್ರಕಾಶ್, ತಾ.ಪಂ ಮಾಜಿ ಅಧ್ಯಕ್ಷೆ ರಮಾದೇವಿ ಚಲಪತಿ, ಗ್ರಾಪಂ ಅಧ್ಯಕ್ಷ ರಾಜಪ್ಪ, ಉಪಾಧ್ಯಕ್ಷೆ ಸಲ್ಮಾ ಮಸ್ತಾನ್, ಸದಸ್ಯರಾದ ರಾಘವೇಂದ್ರ, ಹರ್ಷವರ್ಧನ್, ಎಸ್.ಡಿ.ಎಂ.ಸಿ ಅಧ್ಯಕ್ಷೆ ಜ್ಯೋತಿ ಮುನಿಯಪ್ಪ, ಆಲಹಳ್ಳಿ ಶ್ರೀನಿವಾಸ್, ಚಿಕ್ಕಮುನಿಯಪ್ಪ, ಮುರಳಿ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement