ನಗರ, ಗ್ರಾಮೀಣ ಭಾಗದ ಬಿಜೆಪಿ ಅಧ್ಯಕ್ಷರ ಪದಗ್ರಹಣ
ಕ.ಪ್ರ.ವಾರ್ತೆ ಕೆಜಿಎಫ್ ಜು. 13
ಕೆಜಿಎಫ್ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ನಗರದ ಸುಮನ್ ಕಲ್ಯಾನ ಮಂಟಪದಲ್ಲಿ ಮಾಜಿ ಶಾಸಕ ವೈ. ಸಂಪಂಗಿ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.
ಈ ವೇಳೆ ಕ್ಷೇತ್ರದ ನಗರ ಮತ್ತು ಗ್ರಾಮೀಣ ಭಾಗದ ನೂತನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಆಯ್ಕೆಯನ್ನು ಚುನಾವಣಾ ಸಮಿತಿಯ ಜಿಲ್ಲಾಧ್ಯಕ್ಷ ಜಯರಾಮರೆಡ್ಡಿ ಅವರು ಘೋಷಿಸಿ ನಂತರ ಮಾತನಾಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿಯನ್ನು ಆಡಳಿತಕ್ಕೆ ತರುವಲ್ಲಿ ಆಯಾ ಜಿಲ್ಲೆಯ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು. ಅದೇ ರೀತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ವೈ. ಸಂಪಂಗಿ ಕ್ಷೇತ್ರದಲ್ಲಿ ಈಗಾಗಲೇ 35 ವಾರ್ಡ್ಗಳಲ್ಲಿ ಪಕ್ಷದ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದ್ದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಕ್ಷೇತ್ರದ ಎಲ್ಲಾ ಬಿಜೆಪಿ ಮುಖಂಡರು ಕಾರ್ಯಕರ್ತರು ಶ್ರಮವಹಿಸಿ ಕೆಸಲ ಮಾಡಬೇಕು ಎಂದರು.
ಕೆಜಿಎಫ್ ನಗರ ಘಟಕದ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ಸುರೇಶ್ನಾರಾಯಣ್(ಕುಟ್ಟಿ), ಕಾರ್ಯದರ್ಶಿಯಾಗಿ ಬಾಟಾ ಗೋಪಾಲಕೃಷ್ಣ, ತನಿಗಾಚಲಂ, ಗ್ರಾಮೀಣ ಭಾಗದ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ಅಮರನಾರಾಯಣರೆಡ್ಡಿ, ಕಾರ್ಯದರ್ಶಿಗಳಾಗಿ ಆನಂದ್ನಾಯ್ಡು, ವೆಂಕಟೇಶ್ಗೌಡ ಅವರನ್ನು ಶನಿವಾರ ನಡೆದ ಕಾರ್ಯಕ್ರಮದಲ್ಲಿ ಅಧಿಕಾರ ವಹಿಸಿಕೊಂಡರು.
ಸಭೆಯಲ್ಲಿ ಬಿಜೆಪಿ ಮುಖಂಡರಾದ ಯಶ್ವಂತ್ರಾಜ್, ನೈನಾರವಿ, ಮೌರ್ಯ, ನರಸಿಂಹಮೂರ್ತಿ, ಮುನಿಸ್ವಾಮಿರೆಡ್ಡಿ ಹಾಗೂ ಇತರೆ ಕಾರ್ಯಕರ್ತರು ಹಾಜರಿದ್ದರು.