ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸುದ್ದಿ ಸಂಕ್ಷೇಪ

Mainashree
Updated On : 13 Jul 2013, 11:29 am

ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ
ಕೋಲಾರ: ಶ್ರೀನಿವಾಸಪುರ ತಾಲೂಕಿನ ಗಾಂಡ್ಲಹಳ್ಳಿ ಗ್ರಾಮದಲ್ಲಿ ಪುನರ್ನಿರ್ಮಿತ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯಮುರ್ಮಿತದ ಮಂಡಲಪೂಜಾ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವನ್ನು ಜು.15 ರಂದು ಸೋಮವಾರ ಬೆಳಗ್ಗೆ 9 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಗಾಂಡ್ಲಹಳ್ಳಿಯಲ್ಲಿ ನಡೆಯುವ ಈ ಕಾರ್ಯಕ್ರಮ ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಮುಖ್ಯಸ್ಥರಾದ ವೀರೇಶಾನಂದ ಸರಸ್ವತಿ ಮಹಾರಾಜ್ ಸ್ವಾಮಿಗಳ ಸಾನಿಧ್ಯದಲ್ಲಿ ನೆರವೇರಲಿದೆ. ದಿವಂಗತ ನಿವೃತ್ತ ಮುಖ್ಯೋಪಾಧ್ಯಾಯ ಕೆ. ಹಿರಣ್ಯಗೌಡ ಜ್ಞಾಪಕಾರ್ಥವಾಗಿ ಚೌಡಮ್ಮ ಹಿರಣ್ಯಗೌಡ ಆರೋಗ್ಯ ಮತ್ತು ಶಿಕ್ಷಣ ಟ್ರಸ್ಟ್ ವತಿಯಿಂದ ಇದೇ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವನ್ನು ಸಹ ಏರ್ಪಡಿಸಲಾಗಿದೆ. ವೀರೇಶಾನಂದ ಸರಸ್ವತಿ ಮಹಾರಾಜ್ ಸ್ವಾಮಿ ಮುಖ್ಯ ಅತಿಥಿಗಳಾಗಿದ್ದು, ಹಿರಿಯ ವಕೀಲ ಕೆ.ವಿ.ಶಂಕರಪ್ಪ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ನಿವೃತ್ತ ಡಿ.ಐ.ಜಿ. ಕೆ.ಹೆಚ್. ಶ್ರೀನಿವಾಸನ್, ಕೆ.ಎಚ್. ಗೋಪಾಲಕೃಷ್ಣೇಗೌಡ, ಕೆ.ಹೆಚ್. ಅಶ್ವತ್ಥ ನಾರಾಯಣಗೌಡ, ಸಿ.ಡಿ,ಪಿ.ಓ. ಕೆ.ಹೆಚ್. ಶಿವರಾಮೇಗೌಡ, ಕೆ.ಹೆಚ್. ಗೋವಿಂದರಾಜು, ಕೆ.ಹೆಚ್. ನಾಗರಾಜ್, ಹಿರಿಯ ವಕೀಲ ಬಿಸಪ್ಪಗೌಡ ಮುಂತಾದವರು ಭಾಗವಹಿಸಲಿದ್ದಾರೆ. ಪ್ರತಿಭಾ ಪುರಸ್ಕಾರಕ್ಕೆ ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಟ್ರಸ್ಟಿಗಳಾದ ಕೆ.ಹೆಚ್. ಸಂಪತ್ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿಪಿಆರ್ಗೆ ಹಣ ಬಿಡುಗಡೆ ಮಾಡಲಿ
ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ನಲ್ಲಿ ಕೋಲಾರ ಜಿಲ್ಲೆಯ ಜನರ ಬೇಡಿಕೆಯಾದ ಶಾಶ್ವತ ನೀರಾವರಿಗಾಗಿ ನೀರಾವರಿ ತಜ್ಞ ಡಾ. ಪರಮಶಿವಯ್ಯನವರ ವರದಿಗಾಗಿ (ಡಿಪಿಆರ್) 50 ಕೋಟಿ ಮೀಸಲಿಟ್ಟಿರುವುದನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲೂರು ಅಶ್ವಥರೆಡ್ಡಿ ಸ್ವಾಗತಿಸಿದ್ದಾರೆ. ಬಜೆಟ್ಪೂರ್ವ ಹಾಗೂ ರೈತರ ಸಂಘ ಸಂಸ್ಥೆಗಳ ಮನವಿಗೆ ಸ್ಪಂದಿಸಿ ಹಣ ಮೀಸಲಿಟ್ಟಿರುವುದು ಹಾಗೂ ಎತ್ತಿನಹೊಳೆ ಯೋಜನೆ ಜಾರಿಗೆ 1 ಸಾವಿರ ಕೋಟಿ ಮೀಸಲಿಟ್ಟಿರುವುದು, ಬಯಲುಸೀಮೆಯ ಅದರಲ್ಲೂ ಕೋಲಾರ ಜಿಲ್ಲೆಯ ರೈತರಿಗೆ ಬಜೆಟ್ನಲ್ಲಿ ಅನುದಾನ ನೀಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಶೀಘ್ರವೇ ಯೋಜನಾ ವೆಚ್ಚ ಬಿಡುಗಡೆ ಮಾಡಲು ಇಚ್ಛಾಶಕ್ತಿ ತೋರಲೆಂದು ಅವರು ಒತ್ತಾಯಿಸಿದ್ದಾರೆ.
ಮಹಿಳೆ ಸುಲಿಗೆ ಯತ್ನ: ಆರೋಪಿ ಬಂಧನ
ಶಿಡ್ಲಘಟ್ಟ: ರೇಷ್ಮೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಧರಿಸಿದ್ದ ಆಭರಣ ಕಸಿಯಲು ಯತ್ನಿಸಿದ ಅಪರಿಚಿತ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಪ್ರಕರಣ ಯಣ್ಣೂರಿನಲ್ಲಿ ನಡೆದಿದೆ. ಮಂಜುಳಮ್ಮ ಎನ್ನುವವರು ರೇಷ್ಮೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ನುಸುಳಿ ಬಂದ ಅಪರಿಚಿತ ವ್ಯಕ್ತಿ ಆಭರಣ ಕಸಿಯಲು ಯತ್ನಿಸಿದ. ಈ ಸಂದರ್ಭ ಪಕ್ಕದ ತೋಟದಲ್ಲಿದ್ದವರು ಬಂದು ಆರೋಪಿಯನ್ನು ಬಂಧಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಅಪರಿಚಿತ ವ್ಯಕ್ತಿ ಲೋಕೆಶ್ ಎಂದು ಗುರುತಿಸಲಾಗಿದೆ. ಹೊಸಕೋಟೆ ತಾಲೂಕಿನ ಬಯಲುನರಸಾಪುರದವನೆಂದು ಗುರುತಿಸಲಾಗಿದೆ. ಪ್ರಕರಣವನ್ನು ಗ್ರಾಮಾಂತರ ಠಾಣೆಯಲ್ಲಿ ದಾಖಲು ಮಾಡಲಾಗಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement