ಕರವೇ ನೆರ್ನಕಲ್ಲು ಗ್ರಾಮ ಶಾಖೆ ಉದ್ಘಾಟನೆ
ಚಿಂತಾಮಣಿ: ನಾಡು, ನೆಲ, ಜಲ, ಗಡಿ ವಿಚಾರ ಬಂದಾಗ ಎಲ್ಲರೂ ಪಕ್ಷಾತೀತವಾಗಿ ಸಂಘಟಿಸಬೇಕು ಹಾಗೂ ಕರವೇ ರಾಜ್ಯಾಧ್ಯಕ್ಷರ ಕೈ ಬಲಪಡಿಸುವ ನಿಟ್ಟಿನಲ್ಲಿ ಗ್ರಾಮ ಶಾಖೆಗಳು ಕೆಲಸ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷರಾದ ಎಂ.ವಿ.ನಾರಾಯಣಸ್ವಾಮಿ ತಿಳಿಸಿದರು. ವೇದಿಕೆ ನೆರ್ನಕಲ್ಲು ಗ್ರಾಮ ಶಾಖೆ ಉದ್ಘಾಟನೆ ಹಾಗೂ ಶಾಲಾ ಮಕ್ಕಳಿಗೆ ನೋಟ್ಬುಕ್ ಮತ್ತು ಲೇಖನಿ ಸಾಮಗ್ರಿಗಳ ವಿತರಣಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ನಂತರ ಧ್ವಜಾರೋರಣ ಮಾಡಿದ ಗ್ರಾ.ಪಂ. ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ವೆಂಕಟೇಶಪ್ಪ ಮಾತನಾಡಿದರು.