ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಗುಮಾಸ್ತರಾಗಿ ಕನ್ನಡ ಶಿಕ್ಷಕ ನೇಮಕ

Rashmi Kasaragodu
Updated On : 17 Jul 2013, 12:19 pm

ಶಿಡ್ಲಘಟ್ಟ: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲದೆ ಪರಡಾಡುತ್ತಿದ್ದರೆ ಮತ್ತೊಂದೆಡೆ ಕನ್ನಡ ಶಿಕ್ಷಕರೊಬ್ಬರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದಲ್ಲಿ ಗುಮಾಸ್ತರಾಗಿ ನೇಮಕ ಮಾಡಿಕೊಂಡಿರುವ ಅಂಶ ಬೆಳಕಿಗೆ ಬಂದಿದೆ.
ಪಟ್ಟಣದ ನಗರ್ತಪೇಟೆಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಕೆ.ಎಸ್.ನಾರಾಯಣಮೂರ್ತಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥ ರೆಡ್ಡಿ ತಮ್ಮ ಕಾರ್ಯಾಲಯದಲ್ಲಿ ಗುಮಾಸ್ತರಾಗಿ ನೇಮಕ ಮಾಡಿಕೊಳ್ಳುವ ಮೂಲಕ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ಶಾಲೆ ಆರಂಭವಾಗಿ ಒಂದುವರೆ ತಿಂಗಳು ಕಳೆದರೂ ಉರ್ದು ಶಾಲೆ ವಿದ್ಯಾರ್ಥಿಗಳು ಕನ್ನಡ ಶಿಕ್ಷಕರಿಲ್ಲದೇ ಪರದಾಡುತ್ತಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಲ್ಪಸಂಖ್ಯಾತರ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು ಶಾಲೆಯ ಸುಮಾರು 81ಕ್ಕೂ ಅಧಿಕ ವಿದ್ಯಾರ್ಥಿಗಳು ಕನ್ನಡ ಶಿಕ್ಷಣದಿಂದ ವಂಚಿತಗೊಂಡಿರುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ.
ಈ ಸಂಬಂಧ ಅಲ್ಪಸಂಖ್ಯಾತರ ನಿಯೋಗ ತಾಪಂ ಅಧ್ಯಕ್ಷ ಯರಬಚ್ಚಪ್ಪ ಅವರನ್ನು ಭೇಟಿಯಾಗಿ ಪಟ್ಟಣದ ನಗರ್ತಪೇಟೆಯ ಸರ್ಕಾರಿ ಉರ್ದು ಶಾಲೆಗೆ ಕನ್ನಡ ಶಿಕ್ಷಕರನ್ನು ನೇಮಕ ಮಾಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಬೇಕೆಂದು ಮನವಿ ಮಾಡಿದರು. ಸ್ಪಂದಿಸಿದ ಅಧ್ಯಕ್ಷರು ಕೂಡಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕನ್ನಡ ಶಿಕ್ಷಕ ಕೆ.ಎಸ್.ನಾರಾಯಣಮೂರ್ತಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಬಿಡುಗಡೆಗೊಳಿಸಬೇಕೆಂದು ಸೂಚಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಕುರಿತು ಡಿಡಿಪಿಐಗೆ ದೂರು ಸಲ್ಲಿಸಲಾಗಿದ್ದು ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸಿದಿದ್ದ ಪಕ್ಷದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂಧೆ ಧರಣಿ ನಡೆಸಲಾಗುವುದೆಂದು ಪೋಷಕರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement