ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮೆಹಬೂಬ್ ಪಾಷಾ ನೇಮಕ

Rashmi Kasaragodu
Updated On : 17 Jul 2013, 12:18 pm

ಶಿಡ್ಲಘಟ್ಟ: ತಾಲೂಕು ಜೆಡಿಎಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾಗಿ ಪಟ್ಟಣದ ಫಲೇಚರ್ ಬಡಾವಣೆಯ ಎಂ.ಮೆಹಬೂಬ್ ಪಾಷಾ ಅವರನ್ನು ನೇಮಕ ಮಾಡಿ ಜೆಡಿಎಸ್ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾದ್ಯಕ್ಷ ಎಸ್.ಆರ್.ಮೆಹಬೂಬ್ ಖಾನ್ ಆದೇಶ ಹೊರಡಿಸಿದ್ದಾರೆ.
ಜೆಡ್ಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ರಾಜ್ಯ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಷಕೀಲ್ ರವಾಜ್ರವರ ಆದೇಶದ ಮೇರೆಗೆ ಮೆಹಬೂಬ್ ಪಾಷಾನವರನ್ನು ನೇಮಕ ಮಾಡಲಾಗಿದೆ.
ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ ಪಕ್ಷದ ಮುಖಂಡರನ್ನು ಅಲ್ಪಸಂಖ್ಯಾತ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಅಲ್ಪಸಂಖ್ಯಾತರ ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಆದೇಶದಲ್ಲಿ ಸೂಚಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement