ಕಟ್ಟಡ ಕಾರ್ಮಿಕರಿಗೆ ಇಂದು ಚೆಕ್ ವಿತರಣೆ
ಕೋಲಾರ: ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರಿಗೆ ಗುರುತಿನ ಚೀಟಿ ಮತ್ತು ಹಲವು ಫಲಾನುಭವಿಗಳಿಗೆ ಚೆಕ್ ವಿತರಣಾ ಸಮಾರಂಭವನ್ನು ಕೋಲಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಜು.18 ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಸಿಐಟಿಯು ಜಿಲ್ಲಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿ ರಾಜಗೋಪಾಲ್, ಕಾರ್ಮಿಕ ನಿರೀಕ್ಷಕ ವಿಜಯಕುಮಾರ್, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ, ಖಜಾಂಚಿ ಆನಂದ್ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಸಿದ್ದನಹಳ್ಳಿ ಸೀನಪ್ಪ ವಹಿಸಲಿದ್ದಾರೆ.