ಪೊಲೀಸ್ ಸಿಬ್ಬಂದಿ ಯೋಗಾಸನ ತರಬೇತಿ ಮುಕ್ತಾಯ
ಕೆಜಿಎಫ್: ಜಿಲ್ಲಾ ಮಟ್ಟದ ಪೊಲೀಸ್ ಸಿಬ್ಬಂದಿ 2ನೇ ತಂಡದ ಯೋಗಾಸನ ತರಬೇತಿ ಶಿಬಿರದ ಮುಕ್ತಾಯ ಸಮಾರಂಭ ಹಾಗೂ 3ನೇ ತಂಡದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು ನಗರದ ಕನ್ನಡ ಸಂಘ ಆವರಣದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪೊಲೀಸ್ ರಕ್ಷಣಾಧಿಕಾರಿ ಡಾ. ರೋಹಿಣಿಕಟೋಚ್ ಸಫೆಟ್ ಅವರು ಸದಾ ಒತ್ತಡ ಹಾಗೂ ವಿಶ್ರಾಂತಿ ರಹಿತ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಯೋಗಾಸನ ದೈಹಿಕ ಮತ್ತು ಮಾನಸಿಕ ಒತ್ತಡವನ್ನು ನಿವಾರಿಸಲು ಅನುಕೂಲವಾಗುತ್ತದೆ ಎಂದರು.
ಅದೇ ರೀತಿ ಮುಂದಿನ ದಿನಗಳಲ್ಲಿ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಹಂತ ಹಂತವಾಗಿ ಯೋಗಾಸನ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಸಂಘದ ಮುಖಂಡರು, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ, ಯೋಗ ಶಾಲೆಯ ಶಿಕ್ಷಕರು ಭಾಗವಹಿಸಿದ್ದರು.