ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕೃಷಿ ವಿಮೆಗೆಅರ್ಜಿ ಆಹ್ವಾನ

Rashmi Kasaragodu
Updated On : 20 Jul 2013, 12:37 pm

ಗುಡಿಬಂಡೆ: ರಾಷ್ಟ್ರೀಯ ಕೃಷಿ ವಿಮಾ ಯೋಜನೆ, ರಾಜ್ಯ ಸರ್ಕಾರದ ಆದೇಶದಂತೆ ಪ್ರಕೃತಿ ವಿಕೋಪ, ಕೀಟ ಹಾಗೂ ರೋಗ ಬಾಧೆಗಳಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ರೈತರಿಗೆ ಹಣಕಾಸಿನ ಬೆಂಬಲ ನೀಡುವ ಸಲುವಾಗಿ ರಾಷ್ಟ್ರೀಯ ಕೃಷಿ ವಿಮಾ ಯೋಜನೆಯನ್ನು ಜಾರಿಗೊಳಿಸಿದ್ದು, ತಾಲೂಕಿನ ರೈತ ಬಾಂಧವರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಸಹಾಯಕ ಕೃಷಿ ನಿರ್ದೇಶಕ ನರಸರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಯೋಜನೆಯು ಬೆಳೆ ಸಾಲ ಪಡೆಯುವ ರೈತರಿಗೆ ಕಡ್ಡಾಯವಾಗಿದ್ದು, ಬೆಳೆ ಸಾಲ ಪಡೆಯದ ರೈತರು ತಮ್ಮ ಸ್ವಇಚ್ಛೆಯಿಂದ ಯೋಜನೆಯಲ್ಲಿ ಭಾಗವಹಿಸಬಹುದಾಗಿದ್ದು, ಸಾಲ ಪಡೆಯದ ರೈತರು ಅವರ ವ್ಯಾಪ್ತಿಗೆ ಬರುವ ಸೇವಾ ಕ್ಷೇತ್ರಕ್ಕೆ ಸೇರಿದ ಯಾವುದೇ ಬ್ಯಾಂಕಿನಲ್ಲಿ ಖಾತೆ ತೆರೆದು ವಿಮಾ ಪ್ರಸ್ತಾವನೆ ಸಲ್ಲಿಸಲು ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಕೃಷಿ ಅಧಿಕಾರಿ ಎನ್.ಶಂಕರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಾರಿ ಅಪಘಾತ: ವಿದ್ಯಾರ್ಥಿ ಸಾವು
ಚಿಂತಾಮಣಿ: ಸರಕು ಸಾಗಾಣಿಕೆ ಲಾರಿ ಚಾಲಕನ ಅಜಾಗರುಕತೆಯಿಂದಾಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಪಟ್ಟಣದ ಎಪಿಎಂಸಿ ಮುಂಭಾಗದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.ಪಟ್ಟಣದ ಇಡ್ಲಿಪಾಳ್ಯದ ನಿವಾಸಿ ಮುನಿಯಪ್ಪ ಎಂಬುವರ  ಮಗ ಆನಂದ್(10) ಮೃತ ಬಾಲಕ. ಆನಂದ್ ಪಟ್ಟಣದ ಶಾಲೆಯೊಂದರಲ್ಲಿ 6ನೇತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆಗೆ ಹೋಗುತ್ತಿರುವಾಗ ಲಾರಿ ಚಾಲಕ ಚಂದ್ರ ಅಜಾಗರುಕತೆಯಿಂದ ಚಾಲನೆ ಮಾಡಿದ ಪರಿಣಾಮ, ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದು ನಂತರ ವಿದ್ಯಾರ್ಥಿಗೆ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement