ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜಿಪಂ ಸಿಇಒ ಬಿ.ಎಸ್. ಶೇಖರಪ್ಪಗೆ ಬೀಳ್ಕೊಡುಗೆ

Rashmi Kasaragodu
Updated On : 20 Jul 2013, 12:36 pm

ಚಿಕ್ಕಬಳ್ಳಾಪುರ: ಕೊಡಗು ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡ ಚಿಕ್ಕಬಳ್ಳಾಪುರ ಜಿಪಂ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಎಸ್.ಶೇಖರಪ್ಪ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.ನಗರದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಬಿ.ಎಸ್.ಶೇಖರಪ್ಪರವರು ಚಿಕ್ಕಬಳ್ಳಾಪುರ ಜಿಪಂ ಕಾರ್ಯ ನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುವ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನಿಸಲಾಯಿತು.
ವರ್ಗಾವಣೆ ಸಾಮಾನ್ಯ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಸುರೇಖಾ ವಿಜಯಪ್ರಕಾಶ್ ಮಾತನಾಡಿ,  ಸರ್ಕಾರಿ ನೌಕರರಿಗೆ ವರ್ಗಾವಣೆ ವಿಷಯ ಸಾಮಾನ್ಯ ಸಂಗತಿಯಾದರೂ ಉತ್ತಮವಾಗಿ ಕಾರ್ಯ ನಿರ್ವಹಿಸಿರುವಂತಹವರು ಬೇರೆ ಕಡೆಗೆ ವರ್ಗಾವಣೆಯಾದಾಗ ಯಾರಿಗೆ ಆಗಲಿ ನೋವಾಗುತ್ತದೆ. ಈಗ ಅದೇ ಮನಸ್ಥಿತಿ ನಮ್ಮನ್ನು ಕಾಡುತ್ತಿದೆ ಎಂದರು. ಶೇಖರಪ್ಪ ಅಧಿಕಾರಿಗಳ ಸಮಸ್ಯೆ ತಿಳಿದುಕೊಂಡು ಬಗೆಹರಿಸುತ್ತಿದ್ದರು. ವಿವಿಧ ಇಲಾಖೆಗಳು ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಪ್ರಗತಿ ಸಾಧಿಸುವುದರ ಬಗ್ಗೆ ಸಲಹೆ ನೀಡುತ್ತಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಬಿ.ಎಸ್.ಶೇಖರಪ್ಪ, ಜಿಲ್ಲೆಯ ಜನತೆ ಅಭಿವೃದ್ಧಿ ವಿಷಯದಲ್ಲಿ ನೀಡುತ್ತಿದ್ದ ಸಹಕಾರವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement