ಪ್ರತಿಭಾ ಪುರಸ್ಕಾರ 27ಕ್ಕೆ ಮುಂದೂಡಿಕೆ
ಕೋಲಾರ: ಪ್ರೌಢಶಾಲಾ ಸಹ ಶಿಕ್ಷಕರ ಸಂಘದಿಂದ ಜು.20 ರಂದು ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜು.27ರ ಶನಿವಾರಕ್ಕೆ ಮುಂದೂಡಲಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ. ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿಗೆ ಜು.22 ರಂದು ಚುನಾವಣೆ ಇರುವ ಹಿನ್ನೆಲೆಯಲ್ಲಿ ಪದಾಧಿಕಾರಿಗಳು ಪ್ರಚಾರದ ಒತ್ತಡದಲ್ಲಿರುವುದರಿಂದಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.