ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ರೈತ ಸಂತೆ ನಡೆಸಲು ಸ್ಥಳಾವಕಾಶ ನೀಡಲು ಆಗ್ರಹಿಸಿ ಪ್ರತಿಭಟನೆ

Rashmi Kasaragodu
Updated On : 20 Jul 2013, 12:37 pm

ಕೋಲಾರ: ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇಲ್ಲಿನ ಹಳೆಯ ಬಸ್ನಿಲ್ದಾಣದಲ್ಲಿ ರೈತರ ಸಂತೆಯನ್ನು ನಡೆಸಲು ಸ್ಥಳಾವಕಾಶ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.  ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಘೋಷಣೆ ಕೂಗಿದ ರೈತ ಮುಖಂಡರು, ಈ ಕೂಡಲೇ ರೈತರ ಸಮಸ್ಯೆ ಅರಿತು ಜಿಲ್ಲಾಡಳಿತ ಬಗೆಹರಿಸಬೇಕೆಂದು ಒತ್ತಾಯಿಸಿದರು. ಸಮಸ್ಯೆಗೆ ಕಿವಿಗೊಡಿ: ಕೋಲಾರ ಸೇರಿದಂತೆ ಸುತ್ತಮುತ್ತಲ ಗ್ರಾಮದ ರೈತರು ತರಕಾರಿ, ಹಣ್ಣು ಹೂ ಮಾರಾಟ ಮಾಡುವ ಸಲುವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸುತ್ತಾರೆ. ಆದರೆ, ಮಾರಾಟಕ್ಕಾಗಿ ಎಪಿಎಂಸಿಗೆ ಹೋಗಲು ಸಮಯ, ಹಣ ಸೇರಿದಂತೆ ಎಲ್ಲಾ ರೀತಿಯಲ್ಲೂ ತೊಂದರೆ ರೈತರು ತಮ್ಮ ಬೆಳೆಗಳನ್ನು ಮಾರಾಟ ಮಾಡಲು ದೂರವಿರುವ ಎಪಿಎಂಸಿ ಯಾರ್ಡಿಗೆ ಹೋಗುವುದಕ್ಕೆ ತೊಂದರೆ ಅನುಭವಿಸುತ್ತಿರುವುದನ್ನು ತಿಳಿದುಕೊಂಡು, ಕೂಡಲೇ ಸಣ್ಣ ರೈತರಿಗೆ ಅನುಕೂಲ ಕಲ್ಪಿಸಲು ಜಿಲ್ಲಾಡಳಿತ ಹಳೆಯ ಬಸ್ ನಿಲ್ದಾಣದಲ್ಲಿ ರೈತರ ಸಂತೆಗೆ ಸ್ಥಳಾವಕಾಶವನ್ನು ಕಲ್ಪಿಸಬೇಕೆಂದು ಒತ್ತಾಯಿಸಿದರು. ಮುಖಂಡರಾದ ಕೆ.ಶ್ರೀನಿವಾಸಗೌಡ, ನಾರಾಯಣಗೌಡ ಮುನೇಗೌಡ  ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement