ಚಿಕ್ಕಬಳ್ಳಾಪುರ: ಕಣಿವೆ ಬಾವಿಯಲ್ಲಿ ಶವ ಪತ್ತೆ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಿಂದ ಗೌರಿಬಿದನೂರಿಗೆ ಹೋಗುವ ರಸ್ತೆಯಲ್ಲಿ ಬರುವ ವೀರ ದಿಮ್ಮಮ್ಮ ಕಣಿವೆ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ತವಕದಹಳ್ಳಿ ಗ್ರಾಮದ ಚಿಕ್ಕತಿಮ್ಮಪ್ಪ ಬಿನ್ ಸೂರ್ಯನಾರಾಯಣ ಎಂದು ಗುರುತಿಸಲಾಗಿದೆ.
ದುಷ್ಕರ್ಮಿಗಳು ಕೊಲೆ ಮಾಡಿ ಇಲ್ಲಿ ಬಿಸಾಡಿ ಹೋಗಿದ್ದಾರೋ, ಇಲ್ಲ ಆತ್ಮಹತ್ಯೆಯೋ ಎಂದು ಶಂಕಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.