ಕ್ಯಾರಿ ಓವರ್ ಪದ್ಧತಿ ಜಾರಿಗೆ ಎಬಿವಿಪಿ ಆಗ್ರಹ
ಕ.ಪ್ರ.ವಾರ್ತೆ ಚಿಂತಾಮಣಿ ಜು. 21
ವಿದ್ಯಾರ್ಥಿಗಳಿಗೆ ಕ್ಯಾರಿ ಓವರ್ ಪದ್ಧತಿಯನ್ನು ಮರು ಜಾರಿಗೊಳಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ತಾಲೂಕು ಘಟಕವು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿತು.
ಕ್ಯಾರಿ ಓವರ್ ಪದ್ಧತಿಯನ್ನು ಮರು ಜಾರಿಗೊಳಿಸುವಂತೆ ಆಗ್ರಹಿಸಿ ನೂರಾರು ವಿದ್ಯಾರ್ಥಿಗಳು ಪಟ್ಟಣದ ಮುಖ್ಯ ಬೀದಿಗಳಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿದ ನಂತರ ತಾಲೂಕು ಕಚೇರಿ ಮುಂಭಾಗದಲ್ಲಿ ಸೇರಿ ಧರಣಿ ನಡೆಸಿದರು. ನಂತರ ಕಚೇರಿಗೆ ಮುತ್ತಿಗೆ ಹಾಕಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಮಂಜುನಾಥರೆಡ್ಡಿ ಮಾತನಾಡಿ, ಸಂಬಂಧಪಟ್ಟ ತಾಂತ್ರಿಕ ಶಿಕ್ಷಣ ಇಲಾಖೆ ಈ ಕೂಡಲೇ ಕ್ಯಾರಿ ಓವರ್ ಪದ್ಧತಿಯನ್ನು ಮರು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು. ತಾಂತ್ರಿಕ ಶಿಕ್ಷಣ ಇಲಾಖೆಯ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಬಿವಿಪಿ ಮುಖಂಡರಾದ ವಿಜಯ್, ಸುನೀಲ್ರೆಡ್ಡಿ, ಮುರಳಿ, ನವಕುಮಾರ್, ಮನೋಹರ್, ಪ್ರವೀಣ್, ನಂದಿನಿ, ಶ್ರಾವಣಿ, ಹರ್ಷಿಯಾ, ನಾಗೇಶ್, ಪ್ರತ್ಯುಷ, ಐಶ್ವರ್ಯ, ಹರ್ಷಿತಾ, ಸೌಮ್ಯ ಸೇರಿದಂತೆ ಇನ್ನೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.