ಇಂದು ಲೋಕಾಯುಕ್ತ ಅಹವಾಲು ಸ್ವೀಕಾರ
ಗೌರಿಬಿದನೂರು: ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಅವರು ಶುಕ್ರವಾರ ಮಧ್ಯಾಹ್ನ 3ಗಂಟೆಗೆ ತಾಲೂಕು ಪಂಚಾಯಿತಿಯ ಸಾಮರ್ಥ್ಯಸೌಧದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ತಮ್ಮ ದೂರುಗಳನ್ನು ನೀಡಬಹುದು.
ನಾಳೆ ಪತ್ರಿಕಾ ದಿನ
ಗೌರಿಬಿದನೂರು: ಪಟ್ಟಣದ ಸುಮಂಗಲಿ ಕಲ್ಯಾಣ ಮಂಟಪದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜು.27 ಶನಿವಾರ ಮಧ್ಯಾಹ್ನ 3 ಗಂಟೆಗೆ ಪತ್ರಿಕಾ ದಿನಾಚರಣೆ ಮತ್ತು ವಿಧಾನಸಭಾ ಉಪಸಭಾಧ್ಯಕ್ಷ ಎನ್.ಎಚ್.ಶಿವಶಂಕರರೆಡ್ಡಿ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಕನ್ನಡಪ್ರಭ ಹಾಗೂ ಸುವರ್ಣ ಸುದ್ದಿವಾಹಿನಿಯ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ದಂಡಾಧಿಕಾರಿ ಡಾ.ಎನ್.ಭಾಸ್ಕರ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಜಯರಾಂ ಆಗಮಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದೇವಿಮಂಜುನಾಥ್ ವಹಿಸಲಿದ್ದಾರೆ.
ಉದ್ಯೋಗ ಮೇಳ
ಗೌರಿಬಿದನೂರು: ಆಗಸ್ಟ್ 3 ಮತ್ತು 4ರಂದು ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಎಸ್‌ಜೆಸಿಐಟಿಇ ಚಿಕ್ಕಬಳ್ಳಾಪುರದ ಇನ್‌ಸ್ಟಿಟ್ಯೂಟ್‌ನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಸುಮಾರು 200ಕ್ಕೂ ಹೆಚ್ಚು ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಲಿದ್ದು ಇದರ ಪೂರ್ವಭಾವಿ ಕೌನ್ಸೆಲಿಂಗ್ 27ರಂದು ಬೆಳಗ್ಗೆ 9ರಿಂದ ಸಂಜೆ 4 ರವರೆಗೆ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಗೌರಿಬಿದನೂರಿನಲ್ಲಿ ನಡೆಯಲಿದೆ. ತಾಲೂಕಿನ ಎಲ್ಲಾ ವಿದ್ಯಾವಂತ ನಿರುದ್ಯೋಗಿ ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಉದ್ಯೋಗ ಮೇಳವನ್ನು ಯಶಸ್ವಿಗೊಳಿಸಬೇಕೆಂದು ಕೋರಲಾಗಿದೆ.