ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿತರಣೆ
ಭಾರತೀನಗರ: ಗ್ರಾಮೀಣ ಪ್ರದೇಶ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನೋಟ್ಬುಕ್ ಸೇರಿದಂತೆ ಇತರೆ ಉಪಕರಣಗಳನ್ನು ಸಂಘ ಸಂಸ್ಥೆಗಳು ನೀಡಿ ಪ್ರೋತ್ಸಾಹಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ರೈತ ಸಂಘದ ಮುಖಂಡ ಅಣ್ಣೂರು ಮಹೇಂದ್ರ ತಿಳಿಸಿದರು.
ಇಲ್ಲಿಗೆ ಸಮೀಪದ ಅಣ್ಣೂರು ಗ್ರಾಮದ ಶಿವಜ್ಯೋತಿ ಪಣದ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಗಾಣಿಗರ ರತ್ನ ಶ್ರೀನಿವಾಸ್ ಅವರ ಭಾವನಾ ಚಾರಿಟಬಲ್ ಟ್ರಸ್ಟ್ ವತಿಯಿಂದ ನೀಡಲಾದ ನೋಟ್ಬುಕ್ಗಳನ್ನು ವಿತರಿಸಿ ಅವರು ಮಾತನಾಡಿದರು.
ಗ್ರಾಮೀಣ ವಿದ್ಯಾರ್ಥಿಗಳು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಪಟ್ಟಣ ಪ್ರದೇಶಕ್ಕಿಂತ ಯಾವುದಕ್ಕೂ ಕಡಿಮೆ ಇಲ್ಲದಂತೆ ಸೌಲಭ್ಯಗಳನ್ನು ಸಂಘ ಸಂಸ್ಥೆಗಳು ನೀಡಬೇಕಾಗಿದೆ ಎಂದರು.
ಜಿಲ್ಲಾ ಗಾಣಿಗರ ಸಂಘದ ಅಧ್ಯಕ್ಷ ಚೆನ್ನಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಯೊಬ್ಬರು ಶಿಕ್ಷಣವಂತರಾದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.
ಭಾವನ ಚಾರಿಟಬಲ್ ಟ್ರಸ್ಟ್ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ನೀಡಲಾಗುತ್ತಿದೆ. ಪ್ರಯೋಜನ ಪಡೆಯಬೇಕೆಂದು ತಿಳಿಸಿದರು.
ಮಾಜಿ ಗ್ರಾಪಂ ಮಾಜಿ ಸದಸ್ಯ ಚನ್ನಶೆಟ್ಟಿ, ಎಂ.ಕೆ.ಜಗದೀಶ್, ಮುಖಂಡರಾದ ಎಸ್.ಕುಮಾರ್, ರೇವಣ್ಣ, ಮಹೇಶ್, ಕುಮಾರ್, ರಾಮಶೆಟ್ಟಿ, ಅಶೋಕ್, ಕೆಂಪರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.