ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಶೈಕ್ಷಣಿಕ ಮುನ್ನಡೆಯಿಂದಷ್ಟೇ ಒಕ್ಕಲಿಗ ಸಮುದಾಯ ಅಭಿವೃದ್ಧಿ: ಯ.ರಮೇಶ್

Srinivasa Murthy VN
Updated On : 29 Jul 2013, 12:11 pm

ಚಿಂತಾಮಣಿ: ಒಕ್ಕಲಿಗ ಸಮುದಾಯ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದಲ್ಲಿ ಮಾತ್ರ ಉತ್ತಮವಾಗಿ ಸಾಮಾಜಿಕ ಅಭಿವೃದ್ಧಿ ಹೊಂದಲು ಸಾಧ್ಯವೆಂದು ರಾಜ್ಯ ಒಕ್ಕಲಿಗರ ಸಂಘದ ಖಜಾಂಚಿ ಯಲುವಳ್ಳಿ ರಮೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಪಟ್ಟಣದ ರಾಯಲ್ ಶಾಲೆ ಸಭಾಂಗಣದಲ್ಲಿ ಭಾನುವಾರ ಒಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸ್ಥಿತಿವಂತರು ತಮ್ಮ ಕೈಯಲ್ಲಾದ ಆರ್ಥಿಕ ಸಹಾಯ ಹಸ್ತ ನೀಡಿ ಸಮಾಜದ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದಾಗ ಮಾತ್ರ ವಕ್ಕಲಿಗ ಎಲ್ಲಾ ಕ್ಷೇತ್ರದಲ್ಲಿಯೂ ಮುಂದುವರೆಯಲು ಸಹಕಾರ ಆಗಲಿದೆಯೆಂದು ನುಡಿದರು. ನಂತರ ನಿವೃತ್ತ ಡಿ.ಡಿ.ಪಿ.ಐ ಹನುಮಂತಪ್ಪ ಮಾತನಾಡಿದರು.
ಸ್ವಾಮೀಜಿ ಮೆಚ್ಚುಗೆ: ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಸಿದ್ದೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡುತ್ತಾ ತನ್ನ ಕೈಯಲ್ಲಾದಷ್ಟು ಸಹಾಯ ಹಸ್ತ ನೀಡಿ ಶೈಕ್ಷಣಿಕವಾಗಿ ಸಮುದಾಯವನ್ನು ಮುಂದುವರೆಯಲು ಒತ್ತು ನೀಡುತ್ತಿರುವ ರಾಯಲ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ರಾಮಕೃಷ್ಣಾರೆಡ್ಡಿ ಸೇವೆಯಂತೆ ಎಲ್ಲರೂ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ನೆರವನ್ನು ಕಲ್ಪಿಸಲು ಮುಂದಾಗಬೇಕೆಂದು ಹಿತ ನುಡಿಗಳನ್ನು ನುಡಿದರು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲ್ಲೂಕಿನಲ್ಲೆ ಅತಿ ಹೆಚ್ಚು ಅಂಕ ಪಡೆದ ವರುಣ್‌ಗೌಡ ಪೋಷಕರಿಗೆ ಸಭೆಯಲ್ಲಿ ಪ್ರೋತ್ಸಾಹ ಧನ, ನೆನಪಿನ ಕಾಣಿಕೆ ನೀಡಲಾಯಿತು. ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೂ ಪ್ರೋತ್ಸಾಹ ಧನವನ್ನು ನೀಡಲಾಯಿತು.
ರಾಯಲ್ ವಿದ್ಯಾ ಸಂಸ್ಥೆಯ ಪ್ರಾಂಶುಪಾಲರಾದ ಪ್ರೇಮಲತ ರಾಮಕೃಷ್ಣಾರೆಡ್ಡಿ, ಡಾ.ಅಶೋಕ್, ವೃತ್ತ ನಿರೀಕ್ಷಕ ಆರ್.ವಿ.ಚೌಡಪ್ಪ, ಗುತ್ತಿಗೆದಾರ ಶ್ರೀರಾಮರೆಡ್ಡಿ, ಹೊಟೇಲ್ ಮಾಲೀಕ ಬಿ.ನಾರಾಯಣಸ್ವಾಮಿ, ಕೃಷಿ ಉತ್ಪನ್ನಗಳ ಮಾರಾಟಗಾರರ ಜಿಲ್ಲಾಧ್ಯಕ್ಷ ಡಾ.ಸಿ.ಶಿವಣ್ಣ ಸೇರಿದಂತೆ ಇನ್ನೂ ಹಲವಾರು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಭೆಯಲ್ಲಿ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಆರ್.ವೆಂಕಟರಮಣಾರೆಡ್ಡಿ, ಶಿಕ್ಷಕರಾದ ಚೌಡಪ್ಪ,ಚಂದಾರೆಡ್ಡಿ, ಎಸ್.ಎಸ್.ಐ ಶ್ರೀರಾಮರೆಡ್ಡಿ, ನಾರಾಯಣಸ್ವಾಮಿ ಸೇರಿದಂತೆ ಇನ್ನೂ ನೂರಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement