ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಮಯಕ್ಕೆ ಬಾರದ ಬಸ್: ಪ್ರತಿಭಟನೆ

Vishwanath S
Updated On : 31 Jul 2013, 12:36 pm

ಗೌರಿಬಿದನೂರು: ಗೌರಿಬಿದನೂರು ತಾಲೂಕು ಮಂಚೇನಹಳ್ಳಿ ಹೋಬಳಿ ಕೇಂದ್ರಕ್ಕೆ 10 ಕಿಲೋಮೀಟರ್ ದೂರದಲ್ಲಿರುವ ಕುಗ್ರಾಮ ಮರಿಮಾಕಲಹಳ್ಳಿಗೆ ಹೆಚ್ಚುವರಿಯಾಗಿ ಬಸ್ ಸಂಪರ್ಕ ಕಲ್ಪಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಸಮಯಕ್ಕೆ ಬಾರದ ದೊಡ್ಡಬಳ್ಳಾಪುರ-ಮಂಚೇನಹಳ್ಳಿ ಸರ್ಕಾರಿ ಬಸ್ ಹೋಬಳಿ ಕೇಂದ್ರಕ್ಕೆ ತಲುಪುವ ಹೊತ್ತಿಗೆ ಸಮಯ ಮೀರುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹೋಗಲಾರದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಪ್ರತಿಭಟನಾಕಾರರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೌರಿಬಿದನೂರು ತಾಲೂಕು ಕೇಂದ್ರಕ್ಕೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರಕ್ಕೆ ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳ ಸಮಸ್ಯೆ ಆಲಿಸದ ಅಧಿಕಾರಿಗಳು, ಗೌರಿಬಿದನೂರು ಕೆ.ಎಸ್.ಆರ್.ಟಿ.ಸಿ.ವಿಭಾಗದಿಂದ ಮರಿಮಾಕಲಹಳ್ಳಿಯಿಂದ ಮುಂಜಾನೆ 8.15 ಕ್ಕೆ ಬಸ್ ವ್ಯವಸ್ಥೆ ಕಲ್ಪಸಿಕೊಡುವುದರಿಂದ ಸಾರ್ವಜನಿಕರಿಗೂ ವೃದ್ಧರಿಗೆ, ಮಹಿಳೆಯರಿಗೆ,  ರೋಗಿಗಳು, ಬಡ ಮಕ್ಕಳಿಗೆ, ವಿದ್ಯಾರ್ಥಿಗಳೂ ಸಹಕಾರಿಯಾಗಲಿದೆ ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement