ಕ್ಯಾರಿ ಓವರ್ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ಕೋಲಾರ: ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಕ್ಯಾರಿ ಓವರ್ ಪದ್ಧತಿ ಜಾರಿ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದಿಂದ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ಈ ಹಿಂದೆ ಇದ್ದ ಕ್ಯಾರಿ ಓವರ್ ಪದ್ಧತಿಯನ್ನು ಮುಂದುವರೆಸಬೇಕೆಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಕರವೇ ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ.ರಾಘವೆಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಅನೇಕ ಸರ್ಕಾರಿ ಡಿಪ್ಲೊಮಾ ಕಾಲೇಜುಗಳಲ್ಲಿ ಮೂಲ ಸೌಕರ್ಯವಿಲ್ಲದೆ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸ್ ಆಗುವುದಕ್ಕೆ ಕಷ್ಟವಾಗುತ್ತಿದೆ. ಮೊದಲಿನ ರೀತಿಯಲ್ಲಿ ಪರೀಕ್ಷೆ ನಡೆಸಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಕರವೇ ಮುಖಂಡರಾದ ಕೋದಂಡಪ್ಪ, ಡಿ.ಕೆ.ಪ್ರಭಾಕರಗೌಡ, ಶ್ರೀನಿವಾಸ್, ಕೆ.ಸಿ.ಸಂತೋಷ್, ಸಿ.ಸುರೇಶ್, ಎಸ್.ಎಂ.ರಾಜ್, ಮಹಬೂಬ್, ಚಂದ್ರಶೇಖರ್, ಎಂ.ಮುನಿರಾಜ್, ಚಂದ್ರಶೇಖರ್ ಮತ್ತಿತರರು ಇದ್ದರು.