ಜಿಲ್ಲೆಯಲ್ಲಿ ಇಂದಿನಿಂದ ಹರಿಯಲಿದೆ ಕ್ಷೀರಭಾಗ್ಯ
ಕ.ಪ್ರ.ವಾರ್ತೆ , ಕೋಲಾರ , ಜು.31
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕ್ಷೀರಭಾಗ್ಯ ಯೋಜನೆ ಜಿಲ್ಲೆಯಲ್ಲಿ ಗುರುವಾರದಿಂದ ಅನುಷ್ಠಾನಕ್ಕೆ ಬರಲಿದ್ದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಚಾಲನೆ ನೀಡಲಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳೆಯರ, ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಸರ್ಕಾರದಿಂದ ಶಾಲಾ ಹಾಗೂ ಅಂಗನವಾಡಿ ಮಕ್ಕಳಿಗೆ ಹಾಲು ವಿತರಣೆ ಕಾರ್ಯಕ್ರಮ ಜಾರಿಗೆ ತಂದಿದ್ದು ಆ.1 ರಂದು ಕ್ಷೀರಭಾಗ್ಯ ಯೋಜನೆ ಉದ್ಘಾಟನಾ ಸಮಾರಂಭವನ್ನು ಬೆ.11 ಗಂಟೆಗೆ ನಗರದ ಅಂತರಗಂಗೆ ರಸ್ತೆಯಲ್ಲಿನ ನೂತನ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಆರ್. ವರ್ತೂರು ಪ್ರಕಾಶ್ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸ್ವತಂತ್ರ ಸಚಿವರಾದ ಕೆ.ಎಚ್.ಮುನಿಯಪ್ಪ, ಶಾಸಕರಾದ ಕೆ.ಆರ್.ರಮೇಶ್ಕುಮಾರ್, ಕೆ.ಎಂ. ನಾರಾಯಣಸ್ವಾಮಿ, ಕೆ.ಎಸ್.ಮಂಜುನಾಥಗೌಡ, ಡಾ. ಜಿ.ಮಂಜುನಾಥ, ವೈ.ರಾಮಕ್ಕ, ವಿಧಾನ ಪರಿಷತ್ ಸದಸ್ಯರಾದ ನಸೀರ್ ಅಹಮದ್, ಡಿ.ಎಸ್. ವೀರಯ್ಯ, ವೈ.ಎ. ನಾರಾಯಣಸ್ವಾಮಿ, ಡಾ. ಎಸ್.ಆರ್.ಲೀಲಾ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಚೌಡೇಶ್ವರಿ ರಾಮಚಂದ್ರ, ಉಪಾಧ್ಯಕ್ಷೆ ರತ್ನಮ್ಮ ಗಣೇಶ್, ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಮಂಜುನಾಥ್ ರೆಡ್ಡಿ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಕೋಲಾರ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ 2066 ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳ ಒಟ್ಟು 1.46,809 ಮಂದಿ ಮಕ್ಕಳಿಗೆ ಕ್ಷೀರ ಭಾಗ್ಯ ಯೋಜನೆ ತಲುಪಿಸಲಾಗುತ್ತಿದೆ ಎಂದು ಜಿ.ಪಂ ಸಿಇಒ ಝುಲ್ಫಿಖಾರ್ ಉಲ್ಲಾ ತಿಳಿಸಿದ್ದಾರೆ.
1241 ಕಿರಿಯ ಪ್ರಾಥಮಿಕ ಶಾಲೆ, 669 ಹಿರಿಯ ಪ್ರಾಥಮಿಕ, 176 ಪ್ರೌಢ ಶಾಲೆಗಳ ಮಕ್ಕಳಿಗೆ ಹಾಲಿನ ವಿತರಣೆ ಮಾಡಲಾಗುತ್ತದೆ. ಇದರಿಂದ ಕೋಲಾರ ತಾಲೂಕಿನ 34324, ಬಂಗಾರಪೇಟೆಯ 38003, ಮಾಲೂರಿನ 24880, ಮುಳಬಾಗಿಲಿನ 30160 ಹಾಗೂ ಶ್ರೀನಿವಾಸಪುರ ತಾಲೂಕಿನ 19435 ಮಂದಿ ಮಕ್ಕಳಿಗೆ ಪ್ರಯೋಜನವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಹಾಲು ನೀಡುವ ಕಾರ್ಯಕ್ರಮಕ್ಕೆ ಚಾಲನೆ
ಚಿಕ್ಕಬಳ್ಳಾಪುರ: ನಗರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿ ಆವರಣದಲ್ಲಿರುವ ಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.1 ರಂದು ಬೆಳಗ್ಗೆ 9.30 ಗಂಟೆಗೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಕೆನೆಭರಿತ ಹಾಲಿನ ಪುಡಿಯಿಂದ ತಯಾರಿಸಿದ ಹಾಲನ್ನು ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ.
ರಾಜ್ಯ ಸರ್ಕಾರ ಶಾಲಾ ವಿದ್ಯಾರ್ಥಿಗಳಿಗೆ ಕೆನೆಭರಿತ ಹಾಲಿನ ಪುಡಿಯಿಂದ ತಯಾರಿಸಿದ ಹಾಲನ್ನು ನೀಡುವ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ಜಿ.ಪಂ.ಅಧ್ಯಕ್ಷ ಚಿನ್ನಪ್ಪ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ರಾಘವೇಂದ್ರ ಹನುಮಾನ್, ಸಿಇಓ ನೀಲಾ ಮಂಜುನಾಥ್