ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕನ್ನಡ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಲಿ'

Rashmi Kasaragodu
Updated On : 24 Jun 2013, 12:54 pm

ಚಿಂತಾಮಣಿ: ಕನ್ನಡ ಕಾರ್ಯಕ್ರಮಗಳು ಅರ್ಥಪೂರ್ಣವಾಗಿ ನಡೆಯಲಿ ಎಂದು ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಪಟ್ಟಣದಲ್ಲಿನ ಸರ್ಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದ ಭಾಷೆಗೆ ಪ್ರಥಮ ಆದ್ಯತೆ ನೀಡಿ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಲಿ ಎಂದು ಶುಭ ಹಾರೈಸಿದರು.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಹಿತಿ, ಕವಿಗಳಿಗೆ ಸನ್ಮಾನಿಸಲಾಯಿತು. ತುರ್ತಾಗಿ ದೆಹಲಿಗೆ ಹೋಗಬೇಕಾದ ಹಿನ್ನೆಲೆಯಲ್ಲಿ ಕೆ.ಎಚ್.ಮುನಿಯಪ್ಪ ಸಭೆಯಲ್ಲಿದ್ದ ಎಲ್ಲಾ ಗಣ್ಯರಿಗೆ ವಂದಿಸಿದರು. ಶಾಸಕ ಜೆ.ಕೆ.ಕೃಷ್ಣಾರೆಡ್ಡಿ, ತಾಲೂಕು ದಂಡಾಧಿಕಾರಿ ಎಂ.ಎನ್.ಮಂಜುನಾಥ್, ಸಮ್ಮೇಳನ ಅಧ್ಯಕ್ಷ ಕೋಟಗಲ್ ನಾಗಸುಬ್ರಮಣ್ಯಂ, ಡಿವೈಎಸ್‌ಪಿ ಶೇಖರ್, ಕಸಾಪ ಅಧ್ಯಕ್ಷ ಎ.ಎಸ್.ನಾಗರಾಜ್, ಜಿಲ್ಲಾ ಪಂಚಾಯತ್ ಸದಸ್ಯ ನಂದನವನ ಶ್ರೀರಾಮರೆಡ್ಡಿ, ಕೋಮುಲ್ ನಿದೇಶಕ ಟಿ.ಎನ್.ರಾಜಗೋಪಾಲ್, ಟಿ.ಪಿ.ಎಸ್ ಸದಸ್ಯ ಚೌಡರೆಡ್ಡಿ, ಆನೂರು ಸುಬ್ಬಣ್ಣ, ಸೀಕಲ್ ನರಸಿಂಹಪ್ಪ, ಅಲ್ತಾಫ್ ಪಾಷ, ಸಮಾಜ ಕಲ್ಯಾಣ ಇಲಾಖೆ ಕೃಷ್ಣಪ್ಪ ಸೇರಿದಂತೆ ಕಲಾವಿದರು, ಸಾಹಿತಿಗಳು, ಕಲಾಭಿಮಾನಿಗಳು ಹಾಗೂ ವಿವಿಧ ಕನ್ನಡ ಪರ ಸಂಘಸಂಸ್ಥೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement