ಮಹೇಶ್‌ಕುಮಾರ್‌ಗೆ ಛಾಯಾಗ್ರಾಹಕರಿಂದ ಸನ್ಮಾನ
ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಪದಕ ವಿಜೇತ ಚಿಕ್ಕಬಳ್ಳಾಪುರ ಪೊಲೀಸ್ ಆರಕ್ಷಕ ವೃತ್ತ ನಿರೀಕ್ಷಕ ಎಸ್. ಮಹೇಶ್‌ಕುಮಾರ್ ಅವರನ್ನು ಛಾಯಾಗ್ರಾಹಕರು ಆತ್ಮೀಯವಾಗಿ ಸನ್ಮಾನಿಸಿದರು.
ನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಹೇಶ್‌ಕುಮಾರ್ ಅವರಿಗೆ ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿದ ಛಾಯಾಗ್ರಾಹಕರು, ಮಹೇಶುಕುಮಾರ್ ಅವರ ಕಾರ್ಯ ನಿರ್ವಹಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಚಿಕ್ಕಬಳ್ಳಾಪುರ ತಾಲೂಕು ಛಾಯಾಚಿತ್ರ ಗ್ರಾಹಕರ ಸಂಘದ ಅಧ್ಯಕ್ಷ ವೆಂಕಟರಮಣ ಮಾತನಾಡಿ, ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಜನರ ಮೆಚ್ಚುಗೆ ಪಾತ್ರರಾಗಿರುವ ಎಸ್.ಮಹೇಶ್‌ಕುಮಾರ್ ಅರವರಿಗೆ ಮುಖ್ಯಮಂತ್ರಿ ಪದಕವನ್ನು ನೀಡಿ ಗೌರವಿಸಿರುವುದು ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಛಾಯಾಚಿತ್ರ ಗ್ರಾಹಕರ ಸಂಘದ ಶ್ರೀನಿವಾಸಚಾರಿ, ಸೀನಪ್ಪ, ಗಿರೀಶ್, ಮಂಜುನಾಥ, ಬಿಜಿಎಸೆ ರೆಡ್ಡಿ, ಸುಮಂತ್ ಗೋಪಾಲ್,ಮಂಜು, ಧನಪಾಲ್, ಸುರೇಶ್ ಮುಂತಾದವರು ಉಪಸ್ಥಿತರಿದ್ದರು.