ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

60ಸಾವಿರ ಬೆಲೆ ಆಭರಣ ಕಳವು

Rashmi Kasaragodu
Updated On : 25 Jun 2013, 12:27 pm

ಬಂಗಾರಪೇಟೆ: ಮನೆ ಬೀಗ ಮುರಿದು 60ಸಾವಿರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ದೋಚಿಕೊಂಡು ಹೋಗಿರುವ ಪ್ರಕರಣ ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಯಳಚಮಂದೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಂಚಾಯ್ತಿ ಮಾಜಿ ಸದಸ್ಯ ಅಮರೇಶ್ ಮನೆಯಲ್ಲೇ ಕಳ್ಳತನ ನಡೆದಿದ್ದು ಅಮರೇಶ್ ತನ್ನ ಕುಟುಂಬದ ಸದಸ್ಯರೊಂದಿಗೆ ನೆಂಟರ ಊರಿಗೆ ಹೋಗಿದ್ದಾಗ ಈ ಪ್ರಕರಣ ನಡೆದಿದೆ. ಮುಂಬಾಗಿಲನ್ನು ಮುರಿದು ಒಳ ನುಗ್ಗಿರುವ ಕಳ್ಳರು ಬೀರುವಿನಲ್ಲಿದ್ದ 60ಸಾವಿರ ಮೌಲ್ಯದ ಚಿನ್ನದ ಒಡವೆಗಳನ್ನು ಎತ್ತಿಕೊಂಡು ಹೋಗಿದ್ದಾರೆಂದು ಅಮರೇಶ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ.
ಅರ್ಚಕರ ಮನೆಯಲ್ಲಿ ಕಳವು: ತಾಲೂಕಿನ ಬೂದಿಕೋಟೆ ಗ್ರಾಮದ ವೆಂಕಟರಮಣಸ್ವಾಮಿ ದೇವಾಲಯದ ಅರ್ಚಕ ರಾಮಾಚಾರಿ ಮನೆಯಲ್ಲಿ ಕಳ್ಳತನ ನಡೆದು 4ಲಕ್ಷ ಮೌಲ್ಯದ ದೇವರ ಒಡವೆಗಳನ್ನು ಎತ್ತಿಕೊಂಡು ಹೋಗಿದ್ದಾರೆ.ಅರ್ಚಕರು ಬೇರೆ ಊರಿಗೆ ಹೋಗಿದ್ದಾಗ ಕಳ್ಳರು ಇವರ ಮನೆಗೆ ನುಗ್ಗಿ ಬೀರುವಿನಲ್ಲಿದ್ದ 104ಗ್ರಾಂ ಆಭರಣಗಳು ಮತ್ತು 2ಕೆಜಿ ಬೆಳ್ಳಿ ಆಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದು ಇದರ ಒಟ್ಟು ಮೌಲ್ಯ 4ಲಕ್ಷದಷ್ಟಾಗಿದೆ ಎಂದು ಅಂದಾಜಿಸಲಾಗಿದೆ. ಅರ್ಚಕರು ಸೋಮವಾರ ಮನೆಗೆ ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ ಬಂಗಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement