ಎಸ್ಸೈ ವಾಹನ ಡಿಕ್ಕಿ: ಬಾಲಕ ಸಾವು
ಬಾಗೇಪಲ್ಲಿ: ಸಬ್ಇನ್ಸ್ಪೆಕ್ಟರ್ ಅವರಿಗೆ ಸೇರಿರುವ ಕ್ವಾಲಿಸ್ ವಾಹನ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಬಾಲಕನೊಬ್ಬ ಮೃತಪಟ್ಟಿರುವ ದುರ್ಘಟನೆ ಶನಿವಾರ ಸಂಜೆ ಪಟ್ಟಣದ ನ್ಯಾಷನಲ್ ಕಾಲೇಜಿನ ಮುಂದೆ ನಡೆದಿದೆ.
ಪ್ರಭು (6 ವರ್ಷ) ಮೃತಪಟ್ಟ ಬಾಲಕ. ತಾಲೂಕಿನ ಚೇಳೂರು ಕಡೆಯಿಂದ ಪಟ್ಟಣದ ಕಡೆಗೆ ಬರುತ್ತಿದ್ದ ಕ್ವಾಲಿಸ್, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪ್ರಭುಗೆ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ವಾಹನದಲ್ಲಿ ಚೇಳೂರು ಎಸ್ಐ ವೆಂಕಟಾಚಲಪತಿ ಮತ್ತು ಸಿಬ್ಬಂದಿ ಇದ್ದರು. ಆದರೆ, ವಾಹನವನ್ನು ಯಾರು ಚಾಲನೆ ಮಾಡುತ್ತಿದ್ದರು ಎನ್ನುವುದು ತಿಳಿದಿಲ್ಲ. ಪೊಲೀಸರ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿ ಬಾಲಕ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ: ಅವಸರವೇ ಅಪಾಯಕ್ಕೆ ಕಾರಣ, ನಿಧಾನವಾಗಿ ಚಲಿಸಿ, ಅಪಘಾತಗಳನ್ನು ತಪ್ಪಿಸಿ ಎಂದು ಜನರಿಗೆ ಎಚ್ಚರಿಕೆ ಸಂದೇಶ ನೀಡುವ ಪೊಲೀಸರ ನಿರ್ಲಕ್ಷ್ಯದಿಂದಲೇ ಅಪಘಾತ ಸಂಭವಿಸಿದೆ ಎಂದು ಆರೋಪಿಸಿ ಸಾರ್ವಜನಿಕರು ಮತ್ತು ಮೃತ ಬಾಲಕನ ಕುಟುಂಬಸ್ಥರು ಪಟ್ಟಣದ ಪೊಲೀಸ್ ಠಾಣೆಯ ಮುಂದೆ ಶವವನ್ನಿಟ್ಟು ಪ್ರತಿಭಟನೆ ನಡೆಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.