ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

13ನೇ ವಾರ್ಡ್ ಬಂಡಾಯ ಅಭ್ಯರ್ಥಿ ಜೆಡಿಎಸ್ ಕಾರ್ಯಕರ್ತನಲ್ಲ: ಸ್ಪಷ್ಟನೆ

Parashurama
Updated On : 4 Mar 2013, 12:07 pm

ಕೋಲಾರ: ನಗರದ 13ನೇ ವಾರ್ಡಿನಿಂದ ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದಾಗಿ ಪ್ರಚಾರ ಮಾಡುತ್ತಿರುವ ಮಂಜುನಾಥ್‌ಗೂ ಜೆಡಿಎಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿ.ಎಂ. ಮುನಿಯಪ್ಪ ಹಾಗೂ ಜಿಲ್ಲಾ ಕಾರ್ಯಾಧ್ಯಕ್ಷ ಬ್ಯಾಲಹಳ್ಳಿ ಎಂ. ಗೋವಿಂದಗೌಡ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಜೆಡಿಎಸ್ ತೊರೆದು ಸಚಿವ ವರ್ತೂರ್ ಪ್ರಕಾಶ್ ಬಣಕ್ಕೆ ಹೋಗಿದ್ದ ಮಂಜುನಾಥ್ ನಗರಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದಲ್ಲಿ ಜೆಡಿಎಸ್‌ಗೆ ಬರುವುದಾಗಿ ಹೇಳಿದ್ದರು. ಆದರೆ, 13ನೇ ವಾರ್ಡಿನ ಮತದಾರರು ಇದಕ್ಕೆ ಒಪ್ಪದಿದ್ದ ಕಾರಣ ಟಿಕೆಟ್‌ನ್ನು ಪಕ್ಷದ ನಿಷ್ಠಾವಂತ ಕಾರ್ಯಕರ್ತ ರಾಧಾಕೃಷ್ಣ ಅವರಿಗೆ ನೀಡಲಾಗಿದೆ ಎಂದು ಮಂಜುನಾಥ್ ಚುನಾವಣಾ ಪ್ರಚಾರದ ಸಮಯದಲ್ಲಿ ತಾವು ಮಾಜಿ ಸಚಿವ ಕೆ. ಶ್ರೀನಿವಾಸಗೌಡರ ಬೆಂಬಲಿಗ, ಚುನಾವಣೆಯಲ್ಲಿ ಗೆದ್ದರೆ ಮಾಜಿ ಸಚಿವರನ್ನು ಬೆಂಬಲಿಸುವುದಾಗಿ ಹೇಳುತ್ತಿರುವುದನ್ನು ಮತದಾರರು ನಂಬಬಾರದೆಂದು ಕೋರಿದ್ದಾರೆ. ಮಂಜುನಾಥ್ ಜೆಡಿಎಸ್ ಮುಖಂಡರ ಭಾವಚಿತ್ರಗಳನ್ನು ಪ್ಲೆಕ್ಸ್‌ಗಳಲ್ಲಿ ಹಾಕಿಸಿ ಮತದಾರರಲ್ಲಿ ಗೊಂದಲ ಮೂಡಿಸುತ್ತಿದ್ದು, ಯಾವುದೇ ಕಾರಣಕ್ಕೂ 13ನೇ ವಾರ್ಡಿನ ಮತದಾರರು ಮಂಜುನಾಥ್‌ಗೆ ಮತ ನೀಡದೆ ಅಧಿಕೃತ ಅಭ್ಯರ್ಥಿ ರಾಧಾಕೃಷ್ಣ ಅವರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments