ಕೆಜಿಎಫ್‌ನಲ್ಲಿ ಬಿಜೆಪಿ ಬಿರುಸಿನ ಪ್ರಚಾರ
ಕೆಜಿಎಫ್: ನಗರದ ವಿವಿಧ ವಾರ್ಡ್‌ಗಳಲ್ಲಿ ಶಾಸಕ ವೈ. ಸಂಪಂಗಿ ಸೇರಿದಂತೆ ಜಿಲ್ಲಾ ಉಸ್ತುವಾರಿ ಮುಖಂಡರು ಹಾಗೂ ಜಯನಗರ ಶಾಸಕರಾದ ವಿಜಯಕುಮಾರ್ ಅವರಿಂದ ನಗರದ ಹೆನ್ರೀಸ್ ಬಡಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರವಿ ಅವರ ಪರವಾಗಿ ಮತಯಾಚನೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ವಿಜಯಕುಮಾರ್ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗೆ ಕೋಟ್ಯಂತರ ಅನುದಾನ ಬಿಡುಗಡೆ ಮಾಡಿದೆ. ಕೆಜಿಎಫ್ ನಗರದಲ್ಲಿ 50 ವರ್ಷಗಳಿಂದ ಕಾಣದ ಅಭಿವೃದ್ಧಿ ಈಗ ಕಾಣಿದೆ ಎಂದರು. ಶಾಸಕ ವೈ.ಸಂಪಂಗಿ ಮಾತನಾಡಿ ಕೆಜಿಎಫ್ ನಗರ ಹಾಗೂ ಬಿಜಿಎಂಎಲ್ ಭಾಗದಲ್ಲಿ ಕುಡಿಯುವ ನೀರು ಸಮಸ್ಯೆ ಮೂಲಭೂತ ಸೌಕರ್ಯ ಅಭಿವೃದ್ಧಿ ಜಾರಿಯಾಗಿದೆ. ಜನರ ಮುಂದೆ ಮಾಡಿದ ಅಭಿವೃದ್ಧಿಯೇ ಸಾಕ್ಷಿ ಎಂದರು. ಜನತೆ ಈ ಕ್ಷೇತ್ರದ ಅಭಿವೃದ್ಧಿಯನ್ನು ಕಂಡು ಬಿಜೆಪಿ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಲಿದ್ದಾರೆ ಎಂದರು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಲಕ್ಷ್ಮಯ್ಯ, ಕೆಯುಡಿಎ ಅಧ್ಯಕ್ಷ ವಿಕ್ರಮಾಧಿತ್ಯನ್, ನಗರ ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಮುನಿಸ್ವಾಮಿರೆಡ್ಡಿ, ಡಾ. ಕೃಷ್ಣಮೂರ್ತಿ, ಅಮರನಾರಾಯಣರೆಡ್ಡಿ ಮತ್ತಿತರರು ಹಾಜರಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.