ರಕ್ತಚಂದನ ತುಂಡು ವಶ
ಬಾಗೇಪಲ್ಲಿ: ಅಕ್ರಮವಾಗಿ ಸಾಗಿಸುತ್ತಿದ್ದ 3.5 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ರಕ್ತಚಂದನ ಮರದ ತುಂಡುಗಳು ಮತ್ತು ವಾಹನ ಟ್ಟು ಚಾಲಕ ಪರಾರಿಯಾಗಿರುವ ಘಟನೆ ಪಟ್ಟಣದ ಗೂಳೂರು ರಸ್ತೆಯ ರೆಡ್ಡಿಕೆರೆ ಬಳಿ ಶನಿವಾರ ತಡರಾತ್ರಿ ನಡೆದಿದೆ.
ರಾತ್ರಿ 12 ಗಂಟೆಯ ಸಮಯದಲ್ಲಿ ಗೂಳೂರು ಕಡೆಯಿಂದ 350 ಕೆ.ಜಿ ತೂಕವಿರುವ ರಕ್ತಚಂದನ ಮರದ ತುಡುಗಳನ್ನು ಸೆಲ್ಲೋ ಕಾರಿನಲ್ಲಿ ಬಾಗೇಪಲ್ಲಿ ಪಟ್ಟಣದ ಮಾರ್ಗವಾಗಿ ಬೆಂಗಳೂರಿನ ಕಡೆಗೆ ಸಾಗಿಸಲಾಗುತ್ತಿತ್ತು.
ಚುನಾವಣೆ ಹಿನ್ನೆಲೆಯಲ್ಲಿ ವಾಹನಗಳನ್ನು ಪೊಲೀಸರು ಗೂಳೂರು ಚೆಕ್ಪೋಸ್ಟ್ನಲ್ಲಿ ತಪಾಸಣೆ ಮಾಡುವಾಗ ಅಕ್ರಮ ಬಯಲಾಗಿದೆ. ಆರೋಪಿಗಳು ವಾಹನ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಪೊಲೀಸ್ ವೃತ್ತ ನಿರೀಕ್ಷಕ ಶ್ರೀನಿವಾಸ್ಮೂರ್ತಿ, ಉಪನಿರೀಕ್ಷಕ ಮುನಿರೆಡ್ಡಿ, ಅಪರಾಧ ವಿಭಾಗದ ಉಪನಿರೀಕ್ಷಕ ಶ್ರೀನಿವಾಸಪ್ಪ ಭೇಟಿ ನೀಡಿದ್ದರು. ವಾಹನ ಹಾಗೂ ರಕ್ತಚಂದನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.