ಹಾಲಿ, ಮಾಜಿ ಶಾಸಕರಿಂದ ಅನುದಾನ ದುರ್ಬಳಕೆ: ಮುನಿಯಪ್ಪ
ಕೆಜಿಎಫ್: ಇಲ್ಲಿನ ನಗರಸಭೆ ವ್ಯಾಪ್ತಿಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಲವು ಯೋಜನೆಗಳಡಿ ಅನುದಾನ ಬಿಡುಗಡೆ ಮಾಡಿದೆ. ಆದರೆ, ನಗರ ಹಾಗೂ ಬಿಜಿಎಂಎಲ್ ಪ್ರದೇಶದಲ್ಲಿ ರಸ್ತೆ, ಚರಂಡಿ, ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವಲ್ಲಿ ಶಾಸಕ ವೈ.ಸಂಪಂಗಿ ಹಾಗೂ ಮಾಜಿ ಶಾಸಕ ಎಂ.ಭಕ್ತವತ್ಸಲಂ ವಿಫಲರಾಗಿದ್ದಾರೆ. ಅನುದಾನ ಬಳಕೆ ಮಾಡುವ ಬದಲು ಹಂಚಿಕೊಂಡಂತೆ ಕಾಣುತ್ತದೆ ಎಂದು ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಆರೋಪಿಸಿದರು.
ಇಲ್ಲಿನ ನಗರಸಭಾ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರ, ಕೆಜಿಎಫ್ ನಗರಸಭಾ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿವೆ. ಈ ಬಾರಿ ಜನತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಖಚಿತ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೆಜಿಎಫ್ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನತೆ ಬೆಂಬಲ ನೀಡಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಚುಕ್ಕಾಣಿ ಹಿಡಿಯುವುದು ಖಚಿತ. ಕೆಜಿಎಫ್‌ನ 35 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿ ಅಭಿವೃದ್ಧಿಗೆ ಅವಕಾಶ ನೀಡಲಿದ್ದಾರೆ. ಎಂ.ಜಿ. ಮಾರುಕಟ್ಟೆ ವ್ಯಾಪಾರಸ್ಥರಿಗೆ ಶಾಶ್ವತ ಪರಿಹಾರ, ಭ್ರಷ್ಟಾಚಾರರಹಿತ ಆಡಳಿತ ನೀಡಬಹುದು ಎಂದರು.
ನಗರದ ಬಿಜಿಎಂಎಲ್ ಕಾಲೋನಿಗಳಲ್ಲಿ ಅಭಿವೃದ್ಧಿಯಿಂದ ವಂಚಿತವಾಗಿದೆ. ಕಾಂಗ್ರೆಸ್ ಪಕ್ಷ ಚುಕ್ಕಾಣಿ ಹಿಡಿದು ನಗರ, ಬಿಜಿಎಂಎಲ್ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿ ಜಾರಿಯಾಗಲಿದೆ. ಕೇಂದ್ರ ಸರ್ಕಾರ ಕೆಜಿಎಫ್ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದೆ. ಕೆಜಿಎಫ್‌ನ ದಿನನಿತ್ಯ ಪ್ರಯಾಣಿಕರಿಗೆ ನೆರವಾಗಲು ಮಾರಿಕುಪ್ಪಂ-ಬೆಂಗಳೂರು ಪ್ಯಾಸೆಂಜರ್ ರೈಲು ಸೇರಿದಂತೆ ಮಾರಿಕುಪ್ಪಂ-ಕುಪ್ಪಂ ಮಾರ್ಗಕ್ಕೆ ಪ್ರಸ್ಥುತ ಬಜೆಟ್‌ನಲ್ಲಿ ಅನುದಾನ ಮತ್ತು ಕೋಲಾರದಲ್ಲಿ ರೈಲು ಕೋಚ್ ಕಾರ್ಖಾನೆ ಸ್ಥಾಪನೆಗೆ ಕೇಂದ್ರ ಘೋಷಣೆ ಮಾಡಿದೆ. 1200 ಎಕರೆ ಜಮೀನನ್ನು ರಾಜ್ಯ ಸರ್ಕಾರ ನೀಡಲು ಸಿದ್ದವಿದೆ ಹಾಗೂ ಕೈಗಾರಿಕಾ ಕಾರಿಡರ್ ಸ್ಥಾಪನೆಯಿಂದ ಜಿಲ್ಲೆಯ ಜನತೆಗೆ ಹೆಚ್ಚು ನಿರವಾಗಲಿದೆ ರಾಷ್ಟ್ರೀಯ ಹೆದ್ದಾರಿ 4ರ ಅಭಿವೃದ್ದಿಯಿಂದ ಹೆಚ್ಚು ಕಾರ್ಖಾನೆ ಸ್ಥಾಪನೆಯಿಂದ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಲಿದ್ದು, ಯುವಕ ಯುವತಿಯರಿಗೆ ತರಬೇತಿ ಕೇಂದ್ರ ಟೂಲ್‌ರೂಂ ಸ್ಥಾಪನೆಯಿಂದ ಉದ್ಯೋಗವಕಾಶ ಸಿಗಲಿದೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳಗಿದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.
ಸುಪ್ರೀಂಕೋರ್ಟ್ ತೀರ್ಮಾನದ ನಂತರ ಬಿಜಿಎಂಎಲ್ ಸಮಸ್ಯೆಗೆ ಜಾಗತಿಕ ಟೆಂಡರ್ ಜಾರಿ ಮುಖಾಂತರ ಯುಪಿಎ ಸರ್ಕಾರ 2007ರ ಕ್ಯಾಬಿನೆಟ್ ತೀರ್ಮಾಣದಂತೆ ಗಣಿಗಳ ಪುರ್ನಾರಂಭ, ಕಾರ್ಮಿಕರ ಬೇಡಿಕೆಗಳು ಈಡೇರಳಿದ್ದು ಕೆಜಿಎಫ್ ಗತವೈಭವ ಮರಳಿ ತರಲು ಯುಪಿಎ ಸರ್ಕಾರ ಬದ್ದವಾಗಿದೆ ಎಂದರು.
ಈ ವೇಳೆ ಕಾಂಗ್ರೆಸ್ ವಿಧಾನಸಭಾ ಸದಸ್ಯ ನಜೀರ್‌ಅಹ್ಮದ್, ರೇಷ್ಮೆ ಮಂಡಳಿ ಅಧ್ಯಕ್ಷ ಬಿಸ್ಸೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಆ.ಮು. ಲಕ್ಷ್ಮೀನಾರಾಯಣ, ನಾರಾಯಣರೆಡ್ಡಿ, ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್, ಆಶಾದೀಪ ಸಂಸ್ಥೆಯ ಮುಖ್ಯಸ್ಥೆ ರೂಪಕಲಾ ಶಶಿಧರ್, ಮುಖಂಡರಾದ ಕಿಶೋರ್‌ಕುಮಾರ್, ರಾಧಾಕೃಷ್ಣರೆಡ್ಡಿ, ಶ್ರೀಧರ್‌ರಾಜ್, ಡಿ.ಜಯಪಾಲ್, ರಷೀದ್‌ಖಾನ್, ಜಿ.ಕಾರ್ತಿಕ್, ಶಹೀದ್, ಗುರುರೆಡ್ಡಿ, ಗೋಪಾಲಗೌಡ, ಪ್ರೇಮ್‌ಚಂದ್ ಜೈನ್ ಸೇರಿದಂತೆ 35 ನಗರಸಭಾ ವಾರ್ಡ್‌ಗಳ ಅಭ್ಯರ್ಥಿಗಳು ಹಾಜರಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.