ಅಕ್ರಮವಾಗಿ ಸರ್ಕಾರಿ ಕಟ್ಟಡ ಕೆಡವಿದ್ದಕ್ಕೆ ದೂರು
ಚಿಂತಾಮಣಿ: ಅಕ್ರಮವಾಗಿ ಸರ್ಕಾರಿ ಹಳೆಯ ಕಟ್ಟಡ ಕೆಡವಿದ ವ್ಯಕ್ತಿ ವಿರುದ್ಧ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನಯ್ಯ ಮಂಗಳವಾರ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ದೂರು ನೀಡಿದ್ದಾರೆ. ತಾಲೂಕಿನ ಬತ್ತಲಹಳ್ಳಿ ಗ್ರಾಮದ ಸರ್ಕಾರಕ್ಕೆ ಸೇರಿದ ಹಳೆಯ ಕಟ್ಟಡವೊಂದನ್ನು ಕೆಡವಿ ಒತ್ತುವರಿ ಮಾಡಿಕೊಳ್ಳಲು ಯತ್ನಿಸಿದ ಗ್ರಾಮದ ವ್ಯಕ್ತಿ ಮುನಿಯಪ್ಪ ಎಂಬವರ ಮೇಲೆ ಭೂಮಿಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನಯ್ಯ ದೂರು ನೀಡಿದ್ದಾರೆ. ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿ ಕೇಸ್ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.