ಕಾಮಗಾರಿಗೆ ಚಾಲನೆ
ಶಿಡ್ಲಘಟ್ಟ: ತಾಲೂಕಿನ ನಾಗಮಂಗಲ ಗ್ರಾಮ ಪಂಚಾಯಿತಿಗೆ ಸೇರಿದ ಹೊಸಹಳ್ಳಿ, ನಡುಪನಾಯಕನಹಳ್ಳಿ ಗ್ರಾಮಗಳಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವಿ. ಮುನಿಯಪ್ಪ ಚಾಲನೆ ನೀಡಿದರು.
ಹೊಸಕೋಟೆ ಶಿಡ್ಲಘಟ್ಟ ರಸ್ತೆಯಿಂದ ನಾಗಮಂಗಲ ಮೂಲಕ ಹೊಸಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಒಂದೂವರೆ ಕಿ.ಮೀ ರಸ್ತೆಗೆ 60 ಲಕ್ಷ ರು. ಗಳ ವೆಚ್ಚದಲ್ಲಿ ಡಾಂಬರೀಕರಣಗೊಳಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮದ ಬಹುದಿನಗಳ ಬೇಡಿಕೆಯಂತೆ ಹೊಸಹಳ್ಳಿ ಮತ್ತು ನಾಗಮಂಗಲ ಗ್ರಾಮಗಳನ್ನು ಸುವರ್ಣ ಗ್ರಾಮಗಳನ್ನಾಗಿ ಘೋಷಿಸಲಾಗಿದ್ದು 32 ಲಕ್ಷ ರು.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.
ತಾಪಂ ಅಧ್ಯಕ್ಷ ಯರಬಚ್ಚಪ್ಪ, ಉಪಾಧ್ಯಕ್ಷೆ ಸರಸ್ವತಮ್ಮ ತಮ್ಮಣ್ಣ, ಸದಸ್ಯರಾದ ನರಸಿಂಹಮೂರ್ತಿ, ಚೆನ್ನಕೃಷ್ಣ, ಜಿಪಂ ಸದಸ್ಯರಾದ ಕಂಬದಹಳ್ಳಿ ಸತೀಶ್, ನಾರಾಯಣಸ್ವಾಮಿ, ಮುನಿಯಪ್ಪ ಮುಂತಾದವರು ಇದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.